ವಿದ್ಯಾರ್ಥಿಗಳಲ್ಲಿ ಸ್ವಾಭಿಮಾನ, ನಾಯಕತ್ವ ಗುಣ : ವಿಜಯ ಫರ್ನಾಂಡಿಸ್ ಆಶಯ

New Project (3)
Published on

ಬಂಟ್ವಾಳ: ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಗಳಿಸುವುದರ ಜತೆಗೆ ವಿವಿಧ ದಿನಪತ್ರಿಕೆ ಮತ್ತಿತರ ಮಾಧ್ಯಮಗಳ ಮೂಲಕ ಸಾಮಾನ್ಯ ಜ್ಞಾನ ಪಡೆದು ಸ್ವಾಭಿಮಾನ ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್ ಹೇಳಿದರು.

ನೈನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜಯಶೀಲ ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್‌ನ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ನಿಕಟಪೂರ್ವ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ದಕಟ್ಟೆ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವಿ ಕೆ. ಶುಭಹಾರೈಸಿದರು. ಕ್ಲಬ್ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ ಪ್ರಾಸ್ತಾವಿಕ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ ಶೆಟ್ಟಿ, ಶಿಕ್ಷಕಿಯರಾದ ಅನಿತಾ ಡಿಸೋಜ, ಡೋರಾ ಡಿಸಿಲ್ವ, ಸುರೇಖಾ, ಸುಕನ್ಯಾ ರತ್ನ ಮತ್ತಿತರರಿದ್ದರು. ಮುಖ್ಯ ಶಿಕ್ಷಕ ಜೋಯಲ್ ಲೋಬೊ ಸ್ವಾಗತಿಸಿದರು. ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು. ಶಿಕ್ಷಕ ಜಯಪ್ರಕಾಶ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net