ವಿದ್ಯಾಸಂಸ್ಥೆಗಳಿಂದ ಸ್ಥಳೀಯ ಕಲಾವಿದರಿಗೆ ಉತ್ತೇಜನ

gan-1
Published on

ಕುಂದಾಪುರ: ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು. ಸ್ಥಳೀಯ ಕಲಾವಿದರನ್ನು ಗುರುತಿಸಿ ಉತ್ತೇಜಿಸುವ ಕಾರ್ಯಗಳನ್ನು ವಿದ್ಯಾಸಂಸ್ಥೆಗಳು ಮಾಡಬೇಕು ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ ಶೆಟ್ಟಿ ಹೇಳಿದರು.

ಕುಂದಾಪುರದ ಯಡಾಡಿ-ಮತ್ಯಾಡಿಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರಾಯೋಜಿತ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ ಸಹಯೋಗದಲ್ಲಿ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಮಂಥನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಕನ್ನಡ ಹಾಸ್ಯ ಭಾಷಣಗಾರ ಕೋಗಳಿ ಕೊಟ್ರೇಶ್ ಕೂಡ್ಲಿಗಿ ಶುಭಾಶಂಸನೆಗೈದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿದರು. ರಾಷ್ಟ್ರಮಟ್ಟದ ಯೋಗಪಟು ಸೃಷ್ಟಿ ಕೆ.ವೈ.ದಾವಣಗೆರೆ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಪರೀಕ್ಷಿತ್, ಸ್ಮತಿಶ್ರೀ, ರಾಮನಾಥ ಹಾಗೂ ಪಾಲಕರಾದ ಸಚಿನ್ ಕುಮಾರ್ ಶೆಟ್ಟಿ, ಅಜಯ್ ಶೆಟ್ಟಿ ಮತ್ತು ರೇಖಾ ಕುಲಾಲ್ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸುಜ್ಞಾನ ಕಾಲೇಜಿನ ಪ್ರಾಂಶುಪಾಲ ರಂಜನ್ ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಪ್ರದೀಪ ಕೆ. ಉಪಸ್ಥಿತರಿದ್ದರು. ಪ್ರೇಮಾ ಸ್ವಾಗತಿಸಿದರು. ರಜತ್ ಭಟ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net