ವಿದ್ಯಾಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು

22 ckm 3
ಚಿಕ್ಕಮಗಳೂರಿನ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ವಿವಿಧ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎ.ರಾಜಣ್ಣ ಉದ್ಘಾಟಿಸಿದರು. ಎಸ್.ಶಾಂತಕುಮಾರಿ, ಎಂ.ಪಿ.ಉಡುಪ, ಎಸ್.ಆರ್.ಹೇಮಾ, ಕುಮುದಾ ಎಂ. ಕಿಣಿ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡಿದರಷ್ಟೇ ಸಾಲದು ಅವರಲ್ಲಿ ಉತ್ತಮ ಸಂಸ್ಕಾರ ಮತ್ತು ಸನ್ನಡತೆಯನ್ನೂ ಕಲಿಸುವ ಕೆಲಸ ಮಾಡಬೇಕು ಎಂದು ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎ.ರಾಜಣ್ಣ ಸಲಹೆ ನೀಡಿದರು.

ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ವಿವಿಧ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಶಿಕ್ಷಣವಂತರ ಸಂಖ್ಯೆ ಹೆಚ್ಚಿದೆ. ಆದರೆ ಅವರು ಕೇವಲ ವಿದ್ಯೆಯನ್ನಷ್ಟೇ ಕಲಿತಿದ್ದಾರೆ. ಅವರಲ್ಲಿ ಸಂಸ್ಕಾರದ ಕೊರತೆ ಇದೆ. ಹಾಗಾಗಿ ಶಿಕ್ಷಣವಂತರೇ ಹೆತ್ತವರನ್ನು ವೃದ್ಧಾಶ್ರಮಗಳಿಗೆ ಅಟ್ಟುತ್ತಿದ್ದಾರೆ. ರಾಷ್ಟçದಲ್ಲಿ ಬಹಳಷ್ಟು ಅಪರಾಧ ಪ್ರಕರಣಗಳು ವಿದ್ಯಾವಂತರಿAದಲೇ ನಡೆಯುತ್ತಿವೆ ಎಂದು ವಿಷಾಧಿಸಿದರು.
ಅವಿದ್ಯಾವಂತರು ತಮ್ಮ ಹೆತ್ತವರನ್ನು ವೃದ್ದಾಶ್ರಮಗಳಿಗೆ ಕಳಿಸದೇ ತಾವೇ ಸಾಕಿ ಸಲಹುತ್ತಿದ್ದಾರೆ. ಕಾರಣ ಅವರಲ್ಲಿ ಸಂಸ್ಕಾರವಿದೆ. ಪಾಲಕರು ಮತ್ತು ಶಿಕ್ಷಕರು ಇದನ್ನು ಮನಗಾಣಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ, ಸನ್ನಡತೆ, ಹೆತ್ತವರನ್ನು ಸಲಹುವುದು, ಗುರು ಹಿರಿಯರನ್ನು ಗೌರವಿಸುವುದನ್ನು ಕಲಿಸಬೇಕು. ಹಾಗಾದಾಗ ಮಾತ್ರ ಸ್ವಾಸ್ಥö್ಯ ಸಮಾಜದ ನಿರ್ಮಾಣವಾಗುತ್ತದೆ ಎಂದರು
ವಿದ್ಯಾರ್ಥಿ ಸಂಘಗಳು ನಾಯಕತ್ವದ ಗುಣಗಳನ್ನು ಬೆಳೆಸಲು ಸಹಕಾರಿ. ವಿದ್ಯಾರ್ಥಿಗಳು ಮೊಬೈಲ್‌ನಿಂದ ಹೊರ ಬಂದರೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬಹುದು. ಪ್ರಾಮಾಣಿಕತೆ, ಶಿಸ್ತು, ದೇಶಭಕ್ತಿ, ರಾಷ್ಟçಪ್ರೇಮ ಮತ್ತು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡರೆ ನಾಯಕರಾಗಬಹುದು ಎಂದು ತಿಳಿಸಿದರು
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಜೀವಿನಿ ವಿದ್ಯಾಸಂಸ್ಥೆ ಅಧ್ಯಕ್ಷೆ ಎಸ್.ಶಾಂತಕುಮಾರಿ, ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳು ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಡುವೆ ಸಂಪರ್ಕ ಸೇತುವಿನ ಹಾಗೆ ಕೆಲಸ ಮಾಡಬೇಕು. ಈ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು
ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಂಸ್ಥೆಯ ಖಜಾಂಚಿ ಎಂ.ಪಿ.ಉಡುಪ, ಪ್ರಾಚಾರ್ಯೆ ಎಸ್.ಆರ್.ಹೇಮಾ, ಉಪ ಪ್ರಾಚಾರ್ಯೆ ಕುಮುದಾ ಎಂ. ಕಿಣಿ, ವಿದ್ಯಾರ್ಥಿಗಳಾದ ಬಿ.ಎಲ್.ಯೋಗೇಶ್ವರಿ, ನಿಶ್ಚಿತ, ಬೃಂದಾ, ಅಕ್ಷರಾ ಎಸ್.ಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net