ಶಿಕ್ಷಣ ತಜ್ಞರ ಸಮಾವೇಶ 20ರಂದು

AGM
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಕುಸುಗಲ್ಲ ರಸ್ತೆ ಗ್ರ್ಯಾಂಡ್ ಲಾನ್ಸ್​ನಲ್ಲಿ ಜ. 20ರಂದು ಸಂಜೆ 6 ಗಂಟೆಗೆ ಉತ್ತರ ಕರ್ನಾಟಕ ಮಟ್ಟದ ಶಿಕ್ಷಣ ತಜ್ಞರ ಸಮಾವೇಶ ಆಯೋಜಿಸಲಾಗಿದೆ ಎಂದು ಎಜಿಎಂ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ತಿಳಿಸಿದರು.

ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದ ಪ್ರಮುಖ ಪಾಲುದಾರರಾದ ಶಿಕ್ಷಣ ತಜ್ಞರು, ಆಡಳಿತಗಾರರು, ನೀತಿ ನಿರೂಪಕರು ಪಾಲ್ಗೊಳ್ಳುವರು. ಸುಮಾರು 500 ಪಪೂ, 125 ಪ್ರೌಢ, 50 ಡಿಪ್ಲೊಮಾ, 50 ಐಟಿಟಿ ಕಾಲೇಜ್​ಗಳಿಗೆ ಆಹ್ವಾನ ನೀಡಿದ್ದೇವೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿ ಶೈಕ್ಷಣಿಕ ಅಭ್ಯಾಸಗಳು, ನವೀನ ಬೋಧನಾ ವಿಧಾನಗಳು ಮತ್ತು ಪರಿಣಾಮಕಾರಿ ಎಂದು ಸಾಬೀತಾಗಿರುವ ತಂತ್ರಗಳನ್ನು ವಿನಿಮಯ ಮಾಡಿಕೊಳ್ಳಲಾಗುವುದು. ಶಿಕ್ಷಣದಲ್ಲಿನ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು, ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ. ಶಿಕ್ಷಣದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ಸಂಸ್ಕೃತಿಯನ್ನು ಬೆಳೆಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಡಾ. ಕೆ.ಬಿ. ಗುಡಸಿ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ ರಂಗಸ್ವಾಮಿ, ಸಿಇಟಿ ಮಂಡಳಿ ಸಹಾಯಕ ನಿರ್ದೇಶಕ ಡಾ. ವೈ.ಎನ್. ದೊಡ್ಡಮನಿ, ಡಿಡಿಪಿಯು ಕೆ.ಪಿ. ಸುರೇಶ, ಶಾಲಾ ಶಿಕ್ಷಣ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ, ಕ್ಲಿಕ್ಸ್ ಟ್ಯಾಲೆಂಟ್ ಕನೆಕ್ಟ್ ಪ್ರೖೆ. ಲಿಮಿಟೆಡ್​ನ ಸಿಇಒ ಅರಸು ಎಂ., ಕರ್ನಾಟಕ ಮಾಧ್ಯಮಿಕ ಶಿಕ್ಷಣ ಸಂಘದ ಅಧ್ಯಕ್ಷ ಸಂದೀಪ ಬೂದಿಹಾಳ ಹಾಗೂ ಮಾಜಿ ಮೇಯರ್ ಅನಿಲಕುಮಾರ ಪಾಟೀಲ ಪಾಲ್ಗೊಳ್ಳುವರು.

ಸುದ್ದಿಗೋಷ್ಠಿಯಲ್ಲಿ ಪ್ರೊ. ಸಂದೀಪ ಕ್ಯಾತನವರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net