ಶ್ವಾಸಕೋಶ ರೋಗಗಳಿಗೆ ಪರಿಣಾಮಕಾರಿ

21 KURUGODU 01
ಕುರುಗೋಡಿನ ಕೊಟ್ಟೂರು ಸ್ವಾಮಿ ಶಾಖಾ ವಿರಕ್ತ ಮಠದಲ್ಲಿ ಬಿಜೆಪಿ ಮಂಡಲದಿಂದ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ನಿರಂಜನ ಪ್ರಭು ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ತಹಸೀಲ್ದಾರ್ ನರಸಪ್ಪ, ಸಿಪಿಐ ವಿಶ್ವನಾಥ ಹಿರೇಗೌಡರ್, ಪಿಎಸ್‌ಐ ಸುಪ್ರೀತ್ ವಿರೂಪಾಕ್ಷಪ್ಪ, ಪುರಸಭೆ ಮುಖ್ಯಾಧಿಕಾರಿ ಹರ್ಷವರ್ಧನ್ ಇತರರಿದ್ದರು.
Published on

ಕುರುಗೋಡು: ಯೋಗ ಧನಾತ್ಮಕ ಭಾವನೆ ಮೂಡಿಸುವ ಜತೆ ಮಧುಮೇಹ ಮತ್ತು ರಕ್ತದೊತ್ತಡ ನಿವಾರಣೆಗೆ ಸಹಕಾರಿಯಾಗಿದೆ ಎಂದು ಕೊಟ್ಟೂರು ಸ್ವಾಮಿ ಶಾಖಾ ವಿರಕ್ತ ಮಠದ ಪೀಠಾಧ್ಯಕ್ಷ ನಿರಂಜನ ಪ್ರಭು ಸ್ವಾಮೀಜಿ ಹೇಳಿದರು.

ಪಟ್ಟಣದ ಜಗದ್ಗುರು ಕೊಟ್ಟೂರು ಸ್ವಾಮಿ ಶಾಖಾ ವಿರಕ್ತ ಮಠದಲ್ಲಿ ಕುರುಗೋಡು ಬಿಜೆಪಿ ಮಂಡಲದಿಂದ ಶನಿವಾರ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಹಕ್ಕೆ ಆಹಾರದಷ್ಟೇ ಯೋಗ ಮತ್ತು ಧ್ಯಾನ ಅವಶ್ಯಕವಾಗಿವೆ. ಅಷ್ಟಾಂಗ ಯೋಗದ ಅನುಷ್ಠಾನದಿಂದ ಮಾನಸಿಕ ಸ್ಥಿರತೆ ಲಭಿಸುತ್ತದೆ. ಶ್ವಾಸಕೋಶ ಸಂಬಂಧಿ ರೋಗಗಳಿಗೆ ಯೋಗ ಪರಿಣಾಮಕಾರಿ. ಆದ್ದರಿಂದ ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಬೇಕು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಮಾತನಾಡಿ, ಪಾಶ್ಚಿಮಾತ್ಯ ದೇಶಗಳಲ್ಲೂ ಯೋಗ ದೈನಂದಿನ ಜೀವನಶೈಲಿಯಾಗಿದೆ. ಆದ್ದರಿಂದ ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಮುಖರಾದ ನಟರಾಜ ಗೌಡ, ಬಸವರಾಜ ಮೇಲಗಿರಿ, ಯೋಗಿ, ಉದಯ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net