ಯೋಜನೆಗಳ ಸದುಪಯೋಗ ಅಗತ್ಯ

Mul_projects
Published on

ಮೂಲ್ಕಿ: ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಪ್ರದೇಶದ ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದು ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಾಲ್‌ಸಾರ್ ಹೇಳಿದರು.

ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ಸಹಯೋಗದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಭಾನುವಾರ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮತ್ತು ಜೀವನ್ ಪ್ರಮಾಣ ಪತ್ರ ನೋಂದಣಿ ಶಿಬಿರದಲ್ಲಿ ಮಾತನಾಡಿದರು.

ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷೆ ಶಶಿಕಲಾ ಶಿಬಿರ ಉದ್ಘಾಟಿಸಿದರು. ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಅಭಿವೃದ್ಧಿ ಅಧಿಕಾರಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮಂಜುನಾಥ, ಸದಸ್ಯರಾದ ದಯಾನಂದ ಮಟ್ಟು, ಕೃಷ್ಣ ಶೆಟ್ಟಿಗಾರ್, ಪದ್ಮಿನಿ ವಿ.ಶೆಟ್ಟಿ, ಅಂಚೆ ಇಲಾಖೆಯ ಕೇಶವ ಕೆ., ಸುಜಾತಾ ಎಸ್., ಪದ್ಮಜಾ, ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಎಲ್ಲ ಬ್ರಾಂಚ್ ಮಾಸ್ಟರ್‌ಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭಾನುಮತಿ ಶೆಟ್ಟಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net