ಎಲ್ಲ ಕ್ಷೇತ್ರಗಳ ಹುದ್ದೆಗಳಲ್ಲೂ ಮಹಿಳೆಯರಿಂದ ಸಮರ್ಥ ನಿರ್ವಹಣೆ

04 oct tnp 01
ತಿ.ನರಸೀಪುರ ಹಳೇ ತಿರುಮಕೂಡಲಿನ ಶ್ರೀ ಆದಿಚುಂಚನಗಿರಿ ರಜತೋತ್ಸವ ಭವನದಲ್ಲಿ ಆಯೋಜಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಹಿಳಾ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ತಹಸೀಲ್ದಾರ್ ಟಿ.ಜಿ. ಸುರೇಶಾಚಾರ್ ಉದ್ಘಾಟಿಸಿದರು. ವಸಂತಾ ಶ್ರೀಕಂಠ, ಜಯರಾಮ್ ನೆಲ್ಲಿತ್ತಾಯ, ವಿಜಯಕುಮಾರ್ ನಾಗನಾಳ, ರಂಗವಿಠಲ ಧರ್ಮಾವರಂ ಇದ್ದರು.
Published on

ತಿ ನರಸೀಪುರ: ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಪ್ರತಿಯೊಂದು ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಪುರುಷರಷ್ಟೇ ಸಮನಾಗಿದ್ದಾರೆ. ಸ್ವಸಹಾಯ ಸಂಘಗಳ ಮೂಲಕ ಸಂಘಟಿತರಾಗಿ ಮಹಿಳೆಯರು ಆರ್ಥಿಕ ಸಬಲತೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್ ಹೇಳಿದರು.


ಪಟ್ಟಣದ ಹಳೇ ತಿರುಮಕೂಡಲಿನಲ್ಲಿರುವ ಆದಿಚುಂಚನಗಿರಿ ರಜತೋತ್ಸವ ಭವನದಲ್ಲಿ ಶ್ರೀಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಹಿಳಾ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.


ಈ ಹಿಂದೆ ಉದ್ಯೋಗ ಪುರುಷ ಲಕ್ಷಣಂ ಎನ್ನುವಂತಿತ್ತು. ಈಗ ಕಾಲ ಬದಲಾಗಿದ್ದು, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಮನಾಗಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಿಗುವ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ತಿಳಿಸಿದರು.
ಮನುಕುಲ ಸ್ವಾರ್ಥಕ್ಕಾಗಿ ಬದುಕಿದರೆ ಸಾಲದು, ಸಮಾಜದ ಒಳಿತಿಗಾಗಿ ಬದುಕಬೇಕೆಂಬ ದೊಡ್ಡ ಪರಿಕಲ್ಪನೆಯೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಅನ್ನು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಸ್ಥಾಪಿಸಿದ್ದಾರೆ. ಸಾಲ ಸೌಲಭ್ಯದಂಥ ಹಣಕಾಸಿನ ವಹಿವಾಟಿನ ಜತೆಗೆ ಸಾಮಾಜಿಕ ಸೇವಾ ಕಾರ್ಯಕ್ರಮಗಳು ಜನ ಸಮುದಾಯಕ್ಕೆ ಉಪಯೋಗವಾಗಿವೆ ಎಂದು ಹೇಳಿದರು.


ಪುರಸಭೆ ಅಧ್ಯಕ್ಷೆ ವಸಂತಾ ಶ್ರೀಕಂಠ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯರಾಮ್ ನೆಲ್ಲಿತ್ತಾಯ, ವಿಜಯಕುಮಾರ್ ನಾಗನಾಳ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಎನ್.ಪ್ರಭುಸ್ವಾಮಿ, ಎಸ್‌ಬಿಐ ಸ್ಥಳೀಯ ಶಾಖೆ ವ್ಯವಸ್ಥಾಪಕ ರಂಗವಿಠಲ ಧರ್ಮಾವರಂ, ಪುರಸಭೆ ಮುಖ್ಯಾಧಿಕಾರಿ ಬಿ.ಕೆ.ವಸಂತಕುಮಾರಿ, ಸೇವಾ ಪ್ರತಿನಿಧಿಗಳಾದ ಗಾಯತ್ರಿ, ಜ್ಯೋತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net