

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಇಂದು ಪ್ರಶಸ್ತಿ ಸಿಗದವರು ಹತಾಶರಾಗದೆ ಮುಂದಿನ ಸ್ಪರ್ಧೆಗೆ ಸಿದ್ಧತೆ ನಡೆಸಿ ಗೆಲುವಿಗೆ ಪ್ರಯತ್ನಿಸಬೇಕು. ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಧೀನದ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾ ಕಾರ್ಯಕ್ರಮ ಆಯೋಜನೆಯಲ್ಲಿ ಮುಂದಿರುವುದು ಶ್ಲಾಘನೀಯ ಎಂದು ಮುಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.
ದ.ಕ. ಜಿಪಂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಸೋಮೇಶ್ವರ ಉಚ್ಚಿಲಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಮಂಗಳೂರು ವಿವಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ತಾಲೂಕುಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾಪಟು, ಉಚ್ಚಿಲಗುಡ್ಡೆ ಶಾಲೆ ಹಳೇ ವಿದ್ಯಾರ್ಥಿ ಮುತ್ತಪ್ಪ ಅವರನ್ನು ಸನ್ಮಾನಿಸಲಾಯಿತು. ದಾನಿಗಳು, ಕ್ರೀಡಾಕೂಟಕ್ಕೆ ಶ್ರಮಿಸಿದವರನ್ನು ಗೌರವಿಸಲಾಯಿತು. ಸೋಮೇಶ್ವರ ಪುರಸಭಾ ಸದಸ್ಯ ಅಬ್ದುಲ್ ಸಲಾಂ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಇಬ್ರಾಹಿಂ ಧ್ವಜಾರೋಹಣಗೈದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್, ಉದ್ಯಮಿ ಉದಯಕುಮಾರ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತ್‌ಲ್ ಟ್ರಸ್ಟಿ ಚಂದ್ರಶೇಖರ ಉಚ್ಚಿಲ್, ಕೋಟೆಕಾರ್ ಪಪಂ ಸದಸ್ಯ ಅಹ್ಮದ್ ಅಜ್ಜಿನಡ್ಕ, ಕಾಂಗ್ರೆಸ್ ಮುಖಂಡ ಜಮಾಲ್ ಅಜ್ಜಿನಡ್ಕ, ಉದ್ಯಮಿ ಮಜೀದ್ ಸಿ.ಎ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಹಸೀನಾ, ಉಪಾಧ್ಯಕ್ಷ ಬಶೀರ್, ಅನುದಾನಿತ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮೈಸೂರು ವಿಭಾಗೀಯ ಕಾರ್ಯಾಧ್ಯಕ್ಷ ತ್ಯಾಗಂ ಹರೇಕಳ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಜಗದೀಶ್ ಶೆಟ್ಟಿ, ಸಮಾಜ ಸೇವಕಿ ಸುಹಾಸಿನಿ ಬಬ್ಬುಕಟ್ಟೆ, ತಾಲೂಕು ಸಂಘ ಅಧ್ಯಕ್ಷ ಶೇಖರ್ ಕಡ್ತಲ, ಎ.ಕೆ.ಅಬ್ದುಲ್ ರಹ್ಮಾನ್, ವಸಂತ ರೈ, ನಿವೃತ್ತ ಶಿಕ್ಷಕಿ ಇಂದಿರಾ ಎಂ., ಶಿಕ್ಷಕ ರಾಜೀವ್ ನಾಯಕ್, ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ, ಪ್ರವೀಣ್ ಬಸ್ತಿ ಉಪಸ್ಥಿತರಿದ್ದರು.
ಉಚ್ಚಿಲಗುಡ್ಡೆ ಶಾಲೆ ಮುಖ್ಯಶಿಕ್ಷಕ ಹರೀಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿನಿ ನಫೀಸತುಲ್ ರಿಝಾ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಶಿಕ್ಷಕ ಚಂದ್ರಶೇಖರ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಶಿರ್ಲಾಲ್ ನಿರೂಪಿಸಿದರು.