

ಯಲ್ಲಾಪುರ: ಸಂಘಟನೆ ಬೆಳೆಸಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಂಘದ ನೂತನ ತಾಲೂಕಾಧ್ಯಕ್ಷ ಲೋಕೇಶ ಪಾಟಣಕರ ಹೇಳಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಎಲ್ಲರಿಗೂ ಜವಾಬ್ದಾರಿ ನೀಡಲಾಗಿದೆ. ಕೊಟ್ಟಿರುವ ಜವಾಬ್ದಾರಿ ಸಮರ್ಥವಾಗಿ ನಿರ್ವಹಿಸಲಾಗುವುದು ಎಂದರು.
ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ರೇವಣಕರ ಮಾತನಾಡಿ, ವೈಯಕ್ತಿಕ ಕಾರಣಕ್ಕಾಗಿ ನಾನು ಸಂಘಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಸಂಘದ ನಿಕಟಪೂರ್ವ ಅಧ್ಯಕ್ಷ, ಉಪಾಧ್ಯಕ್ಷರನ್ನು ಗೌರವಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟಣಕರ, ಉಪಾಧ್ಯಕ್ಷ ಅನಿಲ ಮರಾಠೆ, ಸಹ ಕಾರ್ಯದರ್ಶಿ ಈಶ್ವರ ಪಾಟಣಕರ, ಖಜಾಂಚಿ ರೂಪಾ ಪಾಟಣಕರ, ನಿಕಟಪೂರ್ವ ಉಪಾಧ್ಯಕ್ಷ ರವಿ ಪಾಟಣಕರ ಇದ್ದರು.