ದೇವಸ್ಥಾನ ಅಭಿವೃದ್ಧಿಗೆ ಶ್ರಮ

sanmana
ರೋಟರಿ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಟ್ರಸ್ಟ್ ಅಧ್ಯಕ್ಷ ಕೆ.ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
Published on

ಬೈಂದೂರು: ಸಾಮಾಜಿಕ ರಂಗದಲ್ಲಿ ಸುದೀರ್ಘವಾಗಿ ತೊಡಗಿಸಿಕೊಂಡ ಫಲವಾಗಿ ಇಂದು ದೇವರ ಸೇವೆ ಮಾಡುವ ಅವಕಾಶ ದೊರೆತಿದೆ. ಈ ಅವಕಾಶ ಸದುಪಯೋಗಪಡಿಸಿಕೊಂಡು ದೇವಸ್ಥಾನ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಹೇಳಿದರು.

ರೋಟರಿ ಸಮುದಾಯ ಭವನದಲ್ಲಿ ಬುಧವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬೈಂದೂರು ರೋಟರಿ ಟ್ರಸ್ಟ್ ಅಧ್ಯಕ್ಷ ಕೆ.ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ 1ರ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ನಿಯೋಜಿತ ಸಹಾಯಕ ಗವರ್ನರ್ ಐ.ನಾರಾಯಣ್, ಬೈಂದೂರು ರೋಟರಿ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಸುಧಾಕರ ಪಿ. ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ಸುನೀಲ್ ಎಚ್.ಜಿ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net