ರೈತರ ಆರ್ಥಿಕ ಪ್ರಗತಿಗೆ ಪ್ರಯತ್ನ

29GKK3
Published on

ಗೋಕಾಕ: ದೇಶದ ಬೆನ್ನೆಲುಬಾದ ರೈತರಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವುದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ ಹೊರವಲಯದ ಬಸವೇಶ್ವರ ಸಭಾಂಗಣದಲ್ಲಿ ಮಂಗಳವಾರ ಗೋಕಾಕ ೇತ್ರದ ಪ್ರಾಥಮಿಕ ಕಷಿ ಪತ್ತಿನ ಸಹಕಾರ ಸಂಗಳ ಅಧ್ಯರ ಮತ್ತು ಆಡಳಿತ ಮಂಡಳಿ ಸದಸ್ಯರ ಸೌಹಾರ್ದಯುತ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

27 ವರ್ಷಗಳ ಅಧಿಕಾರ ಅವಧಿಯಲ್ಲಿ ಕೃಷಿ ೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ, ನೀರಾವರಿ ಸೌಲಭ್ಯ ಕಲ್ಪಿಸಲು ಹಲವಾರು ಯೋಜನೆ ಅನುಷ್ಠಾನಗೋಳಿಸಿದ್ದೇನೆ. ಬರುವ ದಿನಗಳಲ್ಲಿ ಡಿಸಿಸಿ ಬ್ಯಾಂಕಿನಿಂದ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸಲಾಗುವುದು. ರೆತರು ಕೃಷಿಯಲ್ಲಿ ಆಧುನಿಕ ಪದ್ಧತಿ ಹಾಗೂ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಇಳುವರಿ ಪಡೆಯಬೇಕು ಎಂದರು.

ಮುಖಂಡ ಅಂಬಿರಾವ ಪಾಟೀಲ, ಯುವ ಧುರೀಣ ಅಮರನಾಥ ಜಾರಕಿಹೊಳಿ, ಟಿ.ಆರ್​.ಕಾಗಲ್​, ಮಡೆಪ್ಪ ತೋಳಿನವರ, ಸುರೇಶ್​ ಕಾಡದವರ, ಸಿದ್ದಗೌಡ ಪಾಟೀಲ್​, ಭೀಮಗೌಡ ಪೊಲೀಸ್​ ಗೌಡರ, ಅಡಿವೆಪ್ಪ ನಾವಲಗಟ್ಟಿ, ಬಸಪ್ಪ ಅಮಿಣಿ, ಕಲಪ್ಪ ಚೌಗಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net