ಪರಿಶಿಷ್ಟರ ಕಲ್ಯಾಣಕ್ಕೆ ಶ್ರಮ

ಪರಿಶಿಷ್ಟರ ಕಲ್ಯಾಣಕ್ಕೆ ಶ್ರಮ
Published on

ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಸಮುದಾಯದ ಸ್ಮಶಾನಗಳ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಭವನಗಳ ನಿರ್ಮಾಣ ಅಭಿವೃದ್ಧಿಗೆ ಹಾಗೂ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪರಿಶಿಷ್ಟರ ಕಲ್ಯಾಣಕ್ಕೆ ಶ್ರಮಿಸುತ್ತೇನೆ ಎಂದು ಶಾಸಕ ಕದಲೂರು ಉದಯ್ ಹೇಳಿದರು.

ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

ಪರಿಶಿಷ್ಟ ಸಮುದಾಯದಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಸಮುದಾಯದ ಹಿತದೃಷ್ಟಿಯಿಂದ ಅಗತ್ಯವಾದ ಸ್ಮಶಾನಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಸ್ಮಶಾನಗಳ ಅಭಿವೃದ್ಧಿಗೆ ಅಧಿಕಾರಿಗಳ ಮೂಲಕ ಸಮೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಸೂಚಿಸಿದ್ದೇನೆ ಎಂದರು.

ತಾಲೂಕಿನ ಪರಿಶಿಷ್ಟ ಸಮುದಾಯಕ್ಕೆ ಸಂಬಂಧಿಸಿದ ಡಾ.ಬಿ.ಆರ್.ಅಂಬೇಡ್ಕರ್ ಭವನಗಳ ಅಭಿವೃದ್ಧಿಪಡಿಸಲಾಗುವುದು, ಈಗಾಗಲೇ ಇರುವ ಕೆಲ ಭವನಗಳು ಶಿಥಿಲಗೊಂಡಿದ್ದು ಅವಗಳನ್ನು ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿ ಪುನಶ್ಚೇತನ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೊಸ ಅಂಬೇಡ್ಕರ್ ಭವನಗಳನ್ನು ಈಗಾಗಲೇ ಮಂಜೂರು ಮಾಡಿಸಿದ್ದು ಭವನಗಳಿಗೆ ಭೂಮಿ ಪೂಜೆ ನಡೆಸಿದ್ದು, ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಎಸ್.ಸಿ.ಪಿ / ಟಿ. ಎಸ್.ಪಿ ಯೋಜನೆಯಡಿ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ಹೆಚ್ಚಿನ ಅನುದಾನಗಳನ್ನು ತಂದು ಅದೇ ಸಮುದಾಯಗಳ ಅಭಿವೃದ್ಧಿ ಮೀಸಲಿಟ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಎಸ್ಸಿ ಬ್ಲಾಕ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಯುವಘಟಕದ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಗ್ರಾ.ಪಂ ಅಧ್ಯಕ್ಷ ಜಗದೀಶ್, ಕೆಡಿಪಿ ಸದಸ್ಯ ಅಭಿಷೇಕ್ ಗೌಡ, ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷೆ ಲಕ್ಷ್ಮಮ್ಮ, ಯುವ ಮುಖಂಡ ಸಂತೋಷ್, ಶ್ರೀಕಂಠಗೌಡ, ರಾಜೇಂದ್ರ ನಾಡಗೌಡ, ಚಿಕ್ಕಯ್ಯ, ತಿಮ್ಮಯ್ಯ, ಬೋರಯ್ಯ, ನಾಗರಾಜು, ಅಂಕರಾಜು, ಮುಡಿನಹಳ್ಳಿ ತಿಮ್ಮಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net