ಮಲೆನಾಡಿನಲ್ಲಿ ಪಕ್ಷ ಸಂಘಟಿಸಲು ಶ್ರಮಿಸಬೇಕು: ಈಶ್ವರ ಖಂಡ್ರೆ

minister eshwar khandre visit congress office
ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು. ಮಧು ಬಂಗಾರಪ್ಪ, ಆರ್.ಪ್ರಸನ್ನಕುಮಾರ್, ವೈ.ಎಚ್.ನಾಗರಾಜ್, ಸಿ.ಹನುಮಂತು ಇದ್ದರು.
Published on

ಶಿವಮೊಗ್ಗ: ಮಲೆನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ಮತ್ತು ಸಂಘಟಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದು, ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿಗಳನ್ನೂ ಅನುಷ್ಠಾನ ಮಾಡಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮುಂಬರುವ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಮನೆ ಮನೆಗೆ ತೆರಳಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಜಿಲ್ಲೆಯ ಜನರ ಬಗ್ಗೆ ಕಳಕಳಿ ಹೊಂದಿರುವ ಅರಣ್ಯ ಸಚಿವರು ಶರಾವತಿ ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸುವ ಭರವಸೆ ನೀಡಿದ್ದಾರೆ. ಜತೆಗೆ ಅರಣ್ಯವಾಸಿಗಳ ಹಕ್ಕು ರಕ್ಷಣೆಗೂ ಸೂಚನೆ ನೀಡಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net