ಭವಿಷ್ಯದ ಕನಸು ನನಸಾಗಿಸುವಲ್ಲಿ ಪ್ರಯತ್ನ

varshikotsava
ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ಸಾಧಕ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.
Published on

ಕಾರ್ಕಳ: ಸಮಾಜದ ಏಳಿಗೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳ ಪಾತ್ರ ಮಹತ್ವದ್ದು. ವಿದ್ಯಾರ್ಥಿಗಳು ಅವಕಾಶ ಸದುಪಯೋಗ ಪಡಿಸಿಕೊಂಡು ಭವಿಷ್ಯದ ಕನಸು ನನಸಾಗಿಸುವಲ್ಲಿ ಪ್ರಯತ್ನ ನಡೆಸಬೇಕು ಎಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಹ ಸಂಸ್ಥಾಪಕ ಅಶ್ವಥ್ ಎಸ್.ಎಲ್. ಹೇಳಿದರು.

ಕಾರ್ಕಳ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಇಡ್ಯಾ ಜನಾರ್ದನ್ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯೆ ಸುಮಾ ಕೇಶವ್ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಕೋಶಾಧಿಕಾರಿ ನಿತ್ಯಾನಂದ ಪೈ, ಸದಸ್ಯರಾದ ಶ್ರೀನಿವಾಸ ಕಾರ್ಲ, ಶ್ರೀವರ್ಮ ಅಜ್ರಿ, ಎರ್ಮಾಳ್ ಮೋಹನ್ ಶೆಣೈ, ಗಿರಿಧರ ನಾಯಕ್, ನಿರಂಜನ್ ಜೈನ್, ಸಿ.ಬಿ.ಸಿ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಿಇಒ ಬಾಲಕೃಷ್ಣ, ದಾನಿ ರಘುರಾಮ ಕಾಮತ್, ಪ್ರಭಾರ ಪ್ರಾಂಶುಪಾಲೆ ಫ್ಯಾನಿ ಜೋಯ್ಸ ಉಪಸ್ಥಿತರಿದ್ದರು.

ಪ್ರೌಢಶಾಲಾ ಶಿಕ್ಷಕರಾದ ಸಂದೀಪ್, ಚಂದ್ರಕಲಾ, ಕಾಲೇಜು ವಿಭಾಗದ ಶೈಲಜಾ, ಸದಾನಂದ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನಗಳ ಪಟ್ಟಿ ವಾಚಿಸಿದರು. ಉಪನ್ಯಾಸಕಿ ಜಯಶ್ರೀ ಹೆಗ್ಡೆ ವಿಜ್ಞಾನ ವಿಭಾಗದ 31 ವಿದ್ಯಾರ್ಥಿಗಳಿಗೆ ಸಿಇಟಿ/ನೀಟ್ ಪರೀಕ್ಷಾ ಶುಲ್ಕ ನೀಡಿದರು. ಉಪನ್ಯಾಸಕಿ ಶೋಭಾ ಕುಮಾರಿ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಲ್ಲಿಕಾ ವಂದಿಸಿದರು. ಜಯಶ್ರೀ ಹೆಗ್ಡೆ, ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net