ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನ

04Jaggu7
ಬೆಳಗಾವಿ ಹಿಂದವಾಡಿಯ ಮಹಾವೀರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕರ್ನಾಟಕದ ಪದವೀಧರ ಶಿಕ್ಷಕರ ಸಂಘದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು. ಎಂಎಲ್‌ಸಿ ಪ್ರಕಾಶ ಹುಕ್ಕೇರಿ, ಎಸ್.ಡಿ. ಗಾಂಜಿ, ಎಂ.ಎಂ.ಸಿಂಧೂರ, ಉಮಾದೇವಿ ಹಿರೇಮಠ, ಯಲ್ಲಪ್ಪಗೌಡ, ನರಸಿಂಹಮೂರ್ತಿ ಇತರರಿದ್ದರು.
Published on

ಬೆಳಗಾವಿ: ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಅಭಿವೃದ್ಧಿ ಹೊಂದಬೇಕು. ಅಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಗುಣಾತ್ಮಕ ಶಿಕ್ಷಣ ನೀಡಬೇಕು ಎಂದು ಕನಸು ಕಂಡವನು ನಾನು. ಲೋಕೋಪಯೋಗಿ ಇಲಾಖೆ ಮೂಲಕ ಹಲವು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಂಬರುವ ದಿನಗಳಲ್ಲೂ ಈ ಕಾರ್ಯ ಮುಂದುವರಿಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದ ಹಿಂದವಾಡಿಯ ಮಹಾವೀರ ಭವನದಲ್ಲಿ ಕರ್ನಾಟಕದ ಪದವೀಧರ ಶಿಕ್ಷಕರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಸೇವಾಬಡ್ತಿ, ವರ್ಗಾವಣೆ, ಹೊಸ ಶಿಕ್ಷಕರ ನಿಯೋಜನೆಗೆ ಸಂಬಂಧಿಸಿ ಶಿಕ್ಷಣ ಸಚಿವರು ಮತ್ತು ಶಾಲಾ ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಿ, ಸರ್ಕಾರಿ ಪ್ರಾಥಮಿಕ ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಸುವುದಕ್ಕೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮಾತನಾಡಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು. ಶಾಸಕರಾದ ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಮಾತನಾಡಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎಸ್.ಡಿ.ಗಾಂಜಿ ಉದ್ಘಾಟಿಸಿದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಪಿ.ಮುರಳೀಧರ ಶಿಕ್ಷಕರ ಸಮಸ್ಯೆಗಳ ಕುರಿತು ವಿವರಿಸಿದರು. ಸಂಘದ ಲೋಗೋ ಅನಾವರಣಗೊಳಿಸಲಾಯಿತು.

ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಂ.ಸಿಂಧೂರ, ಉಮಾದೇವಿ ಹಿರೇಮಠ, ಯಲ್ಲಪ್ಪಗೌಡ, ನರಸಿಂಹಮೂರ್ತಿ, ಕೆ.ಎನ್.ಶಂಕರ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ನಾಗಲಾಪುರ, ವಿಠ್ಠಲ ವಾಗೇರಿ, ಗೋವಿಂದ ಸಣ್ಣಕ್ಕಿ, ಸುಕುಮಾರ ಬಾಳಿಕಾಯಿ, ಉಮೇಶ್ವರ ಮರಗಾಲ, ರಾಜೇಶ್ವರಿ ಖನಗಣ್ಣಿ, ದೀಪಿಕಾ ಸುಳೇಬಾವಿ, ಶೃತಿ ಸುಪ್ಪನ್ನವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net