ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬರದಂತೆ ತಡೆಯಲು ಶ್ರಮ

Farmers Protest
Published on

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ದೇಶದಲ್ಲಿ ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬರುವುದನ್ನು ತಡೆಯಲು ರೈತ, ಕಾರ್ಮಿಕ ಸಂಘಟನೆಗಳು ಕರಪತ್ರ, ಮತದಾರರ ಭೇಟಿ ಮೊದಲಾದ ಕಾರ್ಯಕ್ರಮಗಳ ಮೂಲಕ ಶ್ರಮಿಸಲಿದೆ. ಇದರಲ್ಲಿ ನಮ್ಮ ಸಂಘವೂ ಪಾಲ್ಗೊಳ್ಳಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಕಳೆದ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ಮೊದಲಾದ ಸಂಘಟನೆಗಳು ಶ್ರಮಿಸಿದ ಫಲವಾಗಿ ಬಿಜೆಪಿಯನ್ನು ವಿಧಾನಸೌಧದಿಂದ ತೊಲಗಿಸಲಾಯಿತು. ಈಗಲೂ ಇದೇ ಪ್ರಯತ್ನವನ್ನು ಮತ್ತಷ್ಟು ವಿಸ್ತಾರವಾಗಿ ಮಾಡಲಾಗುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ 10 ವರ್ಷಗಳ ಮೋದಿ ಆಡಳಿತ ರೈತ, ಕಾರ್ಮಿಕ, ಜನಸಾಮಾನ್ಯರ ನೆಮ್ಮದಿಗೆ ಭಂಗ ತಂದಿದೆ. ಈ ಅವಧಿಯಲ್ಲಿ ಸುಮಾರು ಒಂದು ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೋದಿ ಸರ್ಕಾರ ಮಾತಿಗೆ ತಪ್ಪಿದೆ. ವಿದ್ಯುಚ್ಛಕ್ತಿ ಕಾಯ್ದೆ ತಿದ್ದುಪಡಿಯನ್ನು ರೈತ ಮುಖಂಡರ ಒಪ್ಪಿಗೆ ಇಲ್ಲದೇ ಸಂಸತ್‌ನಲ್ಲಿ ಮಂಡಿಸಲಾಗಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net