ಫಲಾನುಭವಿಗಳಿಗೆ ನ್ಯಾಯ ಒದಗಿಸಲು ಪ್ರಯತ್ನ

23Huk2
Published on

ಹುಕ್ಕೇರಿ: ಜಿಲ್ಲೆಯ ಬಿಡಿಸಿಸಿ ಬ್ಯಾಂಕ್ ಮತ್ತು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಗಳಲ್ಲಿ ನಾನು ನಟನಾಗಿ ಅಭಿನಯಿಸಿದರೆ, ಅಣ್ಣಾಸಾಹೇಬ ಜೊಲ್ಲೆ ನಿರ್ಮಾಪಕರಾಗಿ, ಬಾಲಚಂದ್ರ ಜಾರಕಿಹೊಳಿ ನಿರ್ದೇಶಕರಾಗಲಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ವಿದ್ಯುತ್ ಸಹಕಾರಿ ಸಂಘದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಗರ್ ಹುಕುಂ ಸಾಗುವಳಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಎರಡು ಸಹಕಾರಿಗಳಿಗೆ ಚುನಾವಣೆ ನಡೆಯುತ್ತಿದ್ದು ಎದುರಿಸಲು ಸನ್ನದ್ಧರಾಗಿದ್ದೇವೆ. ಈ ಎರಡು ಸಹಕಾರಿಗಳ ಆಡಳಿತ ಹಿಡಿಯುವಲ್ಲಿ ನಿರ್ಮಾಪಕ ಮತ್ತು ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಅವರ ಸಲಹೆಯಂತೆ ನಾನು ಭಾಗವಹಿಸುತ್ತೇನೆ ಎಂದರು.

ತಹಸೀಲ್ದಾರ್ ಮಂಜುಳಾ ನಾಯಕ, ಶಿರಸ್ತೇದಾರ ಎನ್.ಆರ್.ಪಾಟೀಲ, ಪುರಸಭೆ ಅಧ್ಯಕ್ಷ ಇಮ್ರಾನ್ ಮೋಮಿನ್, ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ, ಉಪಾಧ್ಯಕ್ಷ ವಿಷ್ಣು ರೆಡೇಕರ, ಸಮಿತಿ ಸದಸ್ಯರಾದ ಕೆಂಪಣ್ಣ ಶಿರಹಟ್ಟಿ, ಸಿಕಂದರ್ ಸನದಿ, ಭಾರತಿ ಬೆಣ್ಣಿ, ಸದಾನಂದ ಗುಡಿಕಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net