ಸರ್ಕಾರಿ ಕಾಲೇಜಿಗೆ ಹೆಚ್ಚಿನ ಅನುದಾನ ನೀಡಲು ಯತ್ನ

10
Published on

ಮೈಸೂರು: ಮಂಚೇಗೌಡನ ಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ವಿಜೇತರಿಗೆ ಭಾನುವಾರ ಬಹುಮಾನ ವಿತರಿಸಲಾಯಿತು.

ಶಾಸಕ ಕೆ.ಹರೀಶ್‌ಗೌಡ ಮಾತನಾಡಿ, ಸರ್ಕಾರಿ ಕಾಲೇಜು ಆದರೂ ಖಾಸಗಿ ಕಾಲೇಜುಗಳಿಗಿಂತಲೂ ಕೂಡ ಉತ್ತಮ ವಿದ್ಯಾರ್ಥಿಗಳು ಕಲಿಯತ್ತಿದ್ದಾರೆ. ಇದರಿಂದ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 46 ಲಕ್ಷ ರೂ. ಅನುದಾನ ನೀಡಿದ್ದು, ಮುಂದೆ ಇನ್ನೂ ಹೆಚ್ಚಿನ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರಿ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಕ್ಲಿಷ್ಟಕರ ಪರಿಸ್ಥಿತಿ ಬಂದರೂ ಎದುರಿಸುವಂತಹ ಧೈರ್ಯ ಇರುತ್ತದೆ. ಸರ್ಕಾರಿ ಕಾಲೇಜಿನಲ್ಲಿ ಓದೋ ವಿದ್ಯಾರ್ಥಿಗಳು ಯಾವುದೇ ಕೀಳರಿಮೆ ಇಲ್ಲದೆ ಸಮಾಜಮುಖಿಯಾಗಿ ಜೀವಿಸುವ ಪ್ರಯತ್ನಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಮೈಸೂರು ನಗರದ ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್‌ಕುಮಾರ್ ಮಾತನಾಡಿದರು. ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು, ಅಭಿವೃದ್ಧಿ ಸಮಿತಿಯ ಮಹಾದೇವಪ್ಪ, ಕಾಲೇಜು ಯೋಜನೆಯ ಶಿವಮಲ್ಲು, ಉಪನ್ಯಾಸಕರಾದ ರೇವಣ್ಣ, ಶ್ರೀಕಂಠಯ್ಯ, ನಾರಾಯಣಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net