ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ

18 KRN-4
ಮೈಸೂರು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ (ಅಕಾಡೆಮಿಕ್ ಕೌನ್ಸಿಲ್) ನಾಮನಿರ್ದೇಶಿತ ಸದಸ್ಯರಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಕೆ.ವಿವೇಕಾನಂದ ಅವರು ಕೆ.ಆರ್.ನಗರದ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿರುವ ಮಾಜಿ ಸಚಿವ ಎಸ್.ನಂಜಪ್ಪ ಅವರ ಪುತ್ಥಳಿಗೆ ಗುರುವಾರ ರಾತ್ರಿ ಮಾಲಾರ್ಪಣೆ ಮಾಡಿ ಮಾತನಾಡಿದರು.
Published on

ಕೆ.ಆರ್.ನಗರ: ಶಾಲಾ ಶಿಕ್ಷಕರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು, ಅವುಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಭವರಸೆ ನೀಡಿದರು.

ಮೈಸೂರು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ (ಅಕಾಡೆಮಿಕ್ ಕೌನ್ಸಿಲ್) ನಾಮನಿರ್ದೇಶಿತ ಸದಸ್ಯರಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಪಟ್ಟಣದ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿರುವ ಮಾಜಿ ಸಚಿವ ಎಸ್.ನಂಜಪ್ಪ ಅವರ ಪುತ್ಥಳಿಗೆ ಗುರುವಾರ ರಾತ್ರಿ ಮಾಲಾರ್ಪಣೆ ಮಾಡಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನ ನಡೆಯುತ್ತಿರುವ ಹಾಸನ, ಮೈಸೂರು ಜಿಲ್ಲೆ ಸೇರಿದಂತೆ ವಿವಿಧ ಪರೀಕ್ಷಾ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಲ್ಲಿನ ಶಿಕ್ಷಕರು ತಮ್ಮ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಎನ್‌ಪಿಎಸ್ ತೆಗೆದುಹಾಕಿ ಒಪಿಎಸ್ ಜಾರಿ ಮಾಡುವ ಬಗ್ಗೆ ಸರ್ಕಾರವನ್ನು ಒತ್ತಾಯ ಮಾಡಲಾಗುವುದು ಎಂದರು.

ಶಿಕ್ಷಕರಿಗೆ ಎರಡು ವರ್ಷಗಳಿಂದ ವೈದ್ಯಕೀಯ ವೆಚ್ಚ ಮರುಪಾವತಿ ಆಗಿಲ್ಲ, ಇದರಿಂದ ಶಿಕ್ಷಕರಿಗೆ ಬಹಳ ತೊಂದರೆಯಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ಶಿಕ್ಷಕರ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಬೇಕು. ಇದಲ್ಲದೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ವಿಚಾರದಲ್ಲೂ ಅನ್ಯಾಯವಾಗಿರುವುದು ಕಂಡು ಬಂದಿದೆ. ಇದನ್ನು ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಅಭಿನಂದನೆ: ಎಂಎಲ್ಸಿ ಕೆ.ವಿವೇಕಾನಂದ ಅವರನ್ನು ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ತಂಬಾಕು ಮಂಡಳಿ ನಿವೃತ್ತ ಅಧೀಕ್ಷಕ ಕೆ.ಎನ್.ದಿನೇಶ್, ರಾಜ್ಯಶಾಸ್ತ್ರ ಅತಿಥಿ ಉಪನ್ಯಾಸಕ ಕೆ.ಎಲ್.ರಮೇಶ್ ಇದೇ ವೇಳೆ ಅಭಿನಂದಿಸಿದರು.

ಪುರಸಭೆ ಸದಸ್ಯ ಕೆ.ಎಲ್.ಜಗದೀಶ್, ಸಾಲಿಗ್ರಾಮ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧು, ನಂಜನಗೂಡು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೀಪು, ಶಿಕ್ಷಕರಾದ ಪುರುಷೋತ್ತಮ್, ರಾಕೇಶ್, ಪಾಲಾಕ್ಷ, ಜೆಡಿಎಸ್ ಮುಖಂಡರಾದ ರಂಗನಾಥನ್, ಕೃಷ್ಣಶೆಟ್ಟಿ, ಮಧುವನಹಳ್ಳಿ ಚಂದ್ರು, ಶಿವಕುಮಾರ್, ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರಾದ ಬಾಲೂರು ನಂಜುಂಡೇಗೌಡ, ಮಿರ್ಲೆ ರಾಧಕೃಷ್ಣ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net