ಪೋಷಕಾಂಶ ಕೊರತೆಯೇ ಅಪೌಷ್ಟಿಕತೆಗೆ ಕಾರಣ

Jagaluru, Egg, Delivery,
Published on

ಗ್ರಾಪಂ ಸದಸ್ಯ ವೀರೇಶ್ ಅಭಿಪ್ರಾಯ I ಅಣಬೂರು ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ

ಜಗಳೂರು: ಅತಿ ಪೋಷಕಾಂಶವುಳ್ಳ ಆಹಾರವಾದ ಮೊಟ್ಟೆಯನ್ನು ಸರ್ಕಾರ ಶಾಲಾ ಮಕ್ಕಳಿಗೆ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಗ್ರಾಮ ಪಂಚಾಯಿತಿ ಸದಸ್ಯ ವೀರೇಶ್ ಹೇಳಿದರು.

ತಾಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮೊಟ್ಟೆಯನ್ನು ಬುಧವಾರ ವಿತರಿಸಿ ಮಾತನಾಡಿದರು.

ನಮ್ಮ ಆಹಾರಗಳಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾದರೆ ಅದು ನಮ್ಮ ದೇಹದ ಅಪೌಷ್ಟಿಕತೆಗೆ ಕಾರಣವಾಗುತ್ತದೆ. ಆದ್ದರಿಂದ ನಾವು ಯಾವುದೇ ಆಹಾರ ಸೇವಿಸಿದರೂ ಮೊದಲು ಅದರಲ್ಲಿ ಪೋಷಕಾಂಶ ಮತ್ತು ಖನಿಜಾಂಶಗಳ ಕಡೆಗೆ ಗಮನಹರಿಸಬೇಕು ಎಂದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಲು ಬಿಸಿಯೂಟ ಜತೆಗೆ ಮೊಟ್ಟೆ ವಿತರಿಸುತ್ತಿದ್ದಾರೆ. ಇದಲ್ಲದೆ ಸಮವಸ್ತ್ರ, ಶೂ, ಶಾಲಾ ಬ್ಯಾಗ್, ವಿದ್ಯಾರ್ಥಿ ವೇತನದಂತಹ ಹಲವು ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುತ್ತಿದೆ. ಪಾಲಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡದೇ ಕಡ್ಡಾಯವಾಗಿ ಶಾಲೆಗೆ ಕಳಿಸಿ ಬುದ್ಧಿವಂತರನ್ನಾಗಿ ಮಾಡಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕ್ಯಾತಪ್ಪ ಮಾತನಾಡಿ, ಸರ್ಕಾರ ಶಿಕ್ಷಣ ಇಲಾಖೆಗೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಬೇಕಾದರೆ ಶಿಕ್ಷಕರು ಪರಿಣಾಮಕಾರಿ ಬೋಧನೆ ಜತೆಗೆ ಸಮುದಾಯವನ್ನು ಸಂಘಟಿಸಿ ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಸಮಿತಿ ಸದಾ ಸಹಕಾರ ನೀಡಬೇಕು ಎಂದರು.

ಗ್ರಾಪಂ ಸದಸ್ಯೆ ಶಿವಲಿಂಗಮ್ಮ ಚಿತ್ತಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಕ್ಷಿ ್ಮೀದೇವಿ, ಶಿಕ್ಷಕರಾದ ಎಚ್.ಎಂ.ಬಸವರಾಜ್, ಜಿ.ರಾಮಾನಾಯ್ಕ, ಎಚ್.ಜಯರಾಂ ನಾಯ್ಕ, ಡಿ.ಜಗದೀಶ್, ಮಂಜಾನಾಯ್ಕ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net