ಸೊರಬದಲ್ಲಿ ಈದ್ ಮಿಲಾದ್ ಸಂಭ್ರಮ

27sor2..
ಸೊರಬದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಮರು ಮೆರವಣಿಗೆ ನಡೆಸಿದರು.
Published on

ಸೊರಬ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆ ಅಂಗವಾಗಿ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಗುರುವಾರ ಸಡಗರ, ಸಂಭ್ರಮ, ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಪಟ್ಟಣದ ಕಾನುಕೇರಿಯ ಅಹಲೆ ಸುನ್ನತ್‌ವಲ್ ಸುನ್ನಿ ಜಮಾತ್ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಖಾಸಗಿ ಬಸ್ ನಿಲ್ದಾಣದ ವೃತ್ತ, ಬಂಗಾರಧಾಮ ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಯುವಕರು ಹಸಿರು ಧ್ವಜ ಹಿಡಿದು ಕುಪ್ಪಳಿಸಿದರು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಬಿಗಿಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net