

ಹಾಸನ: ಈದ್‌ಮಿಲಾದ್ ಆಚರಣೆ ಹಿನ್ನೆಲೆ ಹಾಸನದಲ್ಲಿ ಮುಸ್ಲಿಂ ಸಮುದಾಯದವರು ಮೆರವಣಿಗೆ ನಡೆಸಿದರು.
ಹಾಸನದ ಹೊಸಲೈನ್ ರಸ್ತೆಯಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಕೈಯಲ್ಲಿ ತಮ್ಮ ಧಾರ್ಮಿಕ ಸಂಕೇತದ ಬಾವುಟಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು.
ಈದ್‌ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕಳೆದ ಬಾರಿ ಮೆರವಣಿಗೆ ವೇಳೆ ಪೆಂಡಾಲ್ ಗಣಪತಿಗೆ ಕಲ್ಲು ತೂರಿದ್ದರಿಂದ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿತ್ತು. ಮುನೆಚ್ಚರಿಕೆ ಕ್ರಮವಾಗಿ ಹಾಸನ ನಗರ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿತ್ತು.