ಸಿದ್ದಾಪುರದಲ್ಲಿ ಈದ್ ಮಿಲಾದ್ ಸಂದೇಶ ಜಾಥಾ

ಚಿತ್ರ 25ಎಸ್ ಡಿ ಪಿ 01
Published on


ಸಿದ್ದಾಪುರ: ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಪ್ರಯುಕ್ತ ಸುನ್ನಿ ಯುವಜನ ಸಂಘದ ವತಿಯಿಂದ ಭಾನುವಾರ ಈದ್ ಮಿಲಾದ್ ಸಂದೇಶ ಜಾಥಾ ನಡೆಯಿತು.

ಜಾಥಾಗೆ ಚಾಲನೆ ನೀಡಿದ ಕಕ್ಕಿಂಜೆಯ ಅಬ್ದುಲ್ ರಶೀದ್ ಝೈನಿ ಮಾತನಾಡಿ, ಶಾಂತಿ, ಸಹಬಾಳ್ವೆ ಹಾಗೂ ಸಹೋದರತ್ವ ಸಾರುವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಸಂದೇಶ ಸಾರುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಂ ಜಮಾ ಅತ್ ಮತ್ತು ಸುನ್ನಿ ಯುವಜನ ಸಂಘಟನೆಯಿಂದ ಜಿಲ್ಲಾದ್ಯಂತ ಸಂದೇಶ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಸ್.ಎಸ್.ಎಫ್. ಸಂಚಾಲಕ ಕೆ.ಯಂ.ಬಾವ ಮಾತನಾಡಿ, ಈ ಶಾಂತಿ ಸಂದೇಶ ಜಾಥಾವು ಮುಂದಿನ ದಿನಗಳಲ್ಲಿ ಗೋಣಿಕೊಪ್ಪಲು, ವಿರಾಜಪೇಟೆ, ನಾಪೋಕ್ಲು, ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ಸಂಚರಿಸಲಿದೆ ಎಂದರು. ಜಿಲ್ಲಾಧ್ಯಕ್ಷ ಜುಬೈರ್ ಸಾದಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ, ಹಂಸ , ಅಶ್ರಫ್ ಅಹನ್ಸಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net