

ಸುಳ್ಯ: ಕಳಂಜದಲ್ಲಿ ಯುವಕರ ತಂಡವೊಂದು ಮಸೂದ್(18) ಎಂಬುವರ ಮೇಲೆ ಹಲ್ಲೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕಾಗಿ ತಂಡ ಬಾಟಲಿಯಲ್ಲಿ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡ ಮಸೂದ್‌ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ 8 ಮಂದಿಯ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ರಂಜಿತ್ ಹಾಗೂ ಭಾಸ್ಕರ ಬಂಧಿತರು.
ಎಸ್‌ಡಿಪಿಐ ಖಂಡನೆ: ಅಮಾಯಕ ಮುಸ್ಲಿಂ ಯುವಕನಿಗೆ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿದ್ದು, ಈ ಘಟನೆಯನ್ನು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.