ಅರಕಲಗೂಡು ಪಟ್ಟಣದಲ್ಲಿ 8 ಬೂತ್‌ಗಳು

3ark1
Published on

ಅರಕಲಗೂಡು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸ್ವಾಮಿಗೌಡ ಚಾಲನೆ ನೀಡಿದರು.


ಲಸಿಕೆ ಹಾಕಲು ಪಟ್ಟಣದಲ್ಲಿ ಅಂನವಾಡಿ ಕೇಂದ್ರ, ಸರ್ಕಾರಿ ಪ್ರಾಥಮಿಕ ಶಾಲೆ, ಬಸ್ ನಿಲ್ದಾಣ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ 8 ಬೂತ್‌ಗಳನ್ನು ತೆರೆಯಲಾಗಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ನಿರ್ಮೂಲನೆ ಸಹಕರಿಸಬೇಕು ಎಂದರು. ಮುಂದಿನ ಮೂರು ದಿನ ಆರೋಗ್ಯ ಕಾರ್ಯಕರ್ತೆಯರು ಮನೆ, ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ ಎಂದರು.


ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಘು, ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net