‘ಇಎಲ್‌ಸಿಐಎ ಟೆಕ್ ಶೃಂಗಸಭೆ’ ಪೂರ್ವಸಿದ್ಧತಾ ಕಾರ್ಯಕ್ರಮ

tech summit
Published on

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ಇಎಲ್‌ಸಿಐಎ) ಜುಲೈ 26ರಂದು ನಡೆಯಲಿರುವ ಬಹುನಿರೀಕ್ಷಿತ ‘ಇಎಲ್‌ಸಿಐಎ ಟೆಕ್ ಶೃಂಗಸಭೆ’ಗಾಗಿ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಕಾರ್ಯಕ್ರಮವನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಶನಿವಾರ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ ಕ್ಷೇತ್ರಗಳಲ್ಲಿ ಕರ್ನಾಟಕ ಸಾಧಿಸಿರುವ ಅಗಾಧ ಬೆಳವಣಿಗೆಯನ್ನು ಮತ್ತಷ್ಟು ವಿಸ್ತಾರವಾಗಿ ಪ್ರಚುರಪಡಿಸಲು ಈ ಕಾರ್ಯಕ್ರಮ ಒತ್ತು ನೀಡಲಿದೆ. ಇದರೊಂದಿಗೆ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಕ್ರಿಯಾತ್ಮಕ ಪರಿಸರ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಹೇಳಿದರು.


ಕರ್ನಾಟಕ ಸರ್ಕಾರವು ಸ್ಟಾರ್ಟ್‌ಅಪ್‌ಗಳು ಅಭಿವೃದ್ಧಿ ಹೊಂದಲು ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆಗಳನ್ನು ನೀಡಲು ಅಗತ್ಯವಾದ ಮೂಲಸೌಕರ್ಯ, ಹಣಕಾಸು ಮತ್ತು ಮಾರ್ಗದರ್ಶನವನ್ನು ಒದಗಿಸಲು ಸಿದ್ದವಾಗಿದೆ. ಈ ಕುರಿತು ನಾವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರದಿಂದ ಒದಗಿಸಲಾದ ಸೌಲಭ್ಯಗಳು ಮತ್ತು ಬೆಂಬಲ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಉದ್ಯಮಿಗಳು ಮತ್ತು ನವೋದ್ಯಮಿಗಳಿಗೆ ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಇಎಲ್‌ಸಿಐಎ ಅಧ್ಯಕ್ಷ ರಾಮ್ ಕುಮಾರ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net