ತುಮಕೂರಿನಲ್ಲಿ ಕರೊನಾ ವೈರಸ್​ ಸೋಂಕಿಗೆ ವೃದ್ಧ ಬಲಿ: ರಾಜ್ಯದಲ್ಲಿ 3ನೇ ಸಾವು

corona-virus_1580141672
Published on

ತುಮಕೂರು: ಜಿಲ್ಲೆಯಲ್ಲಿ ಕರೊನಾ ವೈಸರ್​ ಸೋಂಕಿಗೆ ವೃದ್ಧ ಬಲಿಯಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಮೊದಲು ಹಾಗೂ ರಾಜ್ಯದಲ್ಲಿ ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 3ಕ್ಕೆ ಏರಿದೆ.

ಶಿರಾ ಮೂಲದ 65ರ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ.ಸಿ.ರಾಕೇಶ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಮಾರ್ಚ್​ 23ರಂದು ಇವರು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತ್ಯೇಕ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ ವೈರಸ್​ ಸೋಂಕು ಇರುವುದು ದೃಢಪಟ್ಟಿತ್ತು ಎಂದು ಅವರು ಹೇಳಿದರು.

ಮೃತ ದೆಹಲಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಮಾ.5ರಂದು ತೆರಳಿದ್ದರು. ದೆಹಲಿಯ ಜಾಮಿಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇವರ ಜತೆ 13 ಮಂದಿ ಪ್ರಯಾಣ ಬೆಳೆಸಿದ್ದರು ಎಂದು ಪತ್ತೆಯಾಗಿದೆ. ಮೃತಪಟ್ಟ ಕುಟುಂಬದ 20 ಮಂದಿ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net