ಮನೆ ಗೋಡೆ ಕುಸಿದು ವೃದ್ಧೆ ಪಾರು

03 HANUR 3
ಅಜ್ಜೀಪುರ ಗ್ರಾಮದ ದೊಡ್ಡಮ್ಮ ಎಂಬುವರ ಮನೆ ಗೋಡೆ ಕುಸಿತ ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ವಿನೋದ್ ಭೇಟಿ ನೀಡಿ ಪರಿಶೀಲಿಸಿದರು.
Published on

ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದಲ್ಲಿ ಕಳೆದ 2 ದಿನಗಳಿಂದ ಸುರಿದ ಮಳೆಗೆ ಮಂಗಳವಾರ ಮನೆಯ ಗೋಡೆ ಕುಸಿದಿದ್ದು, ಮನೆಯಲ್ಲಿದ್ದ ವೃದ್ಧೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗ್ರಾಮದ ದೊಡ್ಡಮ್ಮ ಎಂಬುವರು ಮನೆಯಲ್ಲಿ ಮಲಗಿದ್ದರು. ಈ ವೇಳೆ ಮನೆಯ ಗೋಡೆ ತೇವಾಂಶದಿಂದ ಕುಸಿದು ಬಿದ್ದಿದೆ. ಇದರಿಂದ ಕೆಲ ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುದ್ದಿ ತಿಳಿದು ಗ್ರಾಮ ಆಡಳಿತ ಅಧಿಕಾರಿ ವಿನೋದ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ದೊಡ್ಡಮ್ಮ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಿದರು. ಅಗತ್ಯ ಕ್ರಮವಹಿಸುವುದಾಗಿ ವಿನೋದ್ ಅವರು ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net