ಜನಪ್ರತಿನಿಧಿಗಳ ಆಯ್ಕೆ ಪ್ರತಿಯೊಬ್ಬರ ಕರ್ತವ್ಯ

28.ktal.02
Published on

ಕವಿತಾಳ: ದೇಶದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಪಟ್ಟಣದಲ್ಲಿ ಪಪಂ., ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಭಾನುವಾರ ಮಾತನಾಡಿದರು. ಮತದಾನ ಮಾಡುವ ಮುಖಾಂತರ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮೇ 7ರಂದು ಲೋಕಸಭಾ ಚುನಾವಣೆಗೆ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net