

ಹುಬ್ಬಳ್ಳಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 45ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನಶಿಪ್ನಲ್ಲಿ ಭಾಗವಹಿಸಿದ್ದ ನೈಋತ್ಯ ರೈಲ್ವೆಯ ಉದ್ಯೋಗಿ ಪ್ರಮೋದ ಹರಿ ನಾಯ್ಕ ಅವರು ಶಾಟ್ಫುಟ್ನಲ್ಲಿ ಚಿನ್ನದ ಪದಕ ಹಾಗೂ ಡಿಸ್ಕಸ್ ಥ್ರೋನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಹುಬ್ಬಳ್ಳಿಯವರಾದ ಇವರು, ಇಂಡೋನೇಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಾಸ್ಟರ್ಸ್ ಹ್ಯಾಮರ್ ಥ್ರೋ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.