ಅಧ್ಯಕ್ಷರಾಗಿ ಜೋಸೆಫ್ ಕ್ವಾಡ್ರಸ್ ಆಯ್ಕೆ

Kin_Joseph
Published on

ಕಿನ್ನಿಗೋಳಿ: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮುಂದಿನ 5 ವರ್ಷಗಳ ಅವಧಿಗೆ ಎಂಸಿಸಿ ಬ್ಯಾಂಕ್ ನಿವೃತ್ತ ಜನರಲ್ ಮ್ಯಾನೇಜರ್ ಜೋಸೆಫ್ ಕ್ವಾಡ್ರಸ್ ಅಧ್ಯಕ್ಷರಾಗಿ, ನಡುಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಪುರಂದರ ಎಂ.ಶೆಟ್ಟಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತೆರೆಜಾ ಕ್ರಾಸ್ತಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net