ವಿರಶೈವ ಮಹಾಸಭಾ ಜಿಲ್ಲಾ ಸಮಿತಿಗೆ ಆಯ್ಕೆ

2 ckm 5 lokesh
ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಎಚ್.ಎಂ.ಲೋಕೇಶ್ ಮಾತನಾಡಿದರು.
Published on

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭೆಯ ರಾಜ್ಯ ಸಮಿತಿಯ ನಿರ್ದೇಶನದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಚುನಾವಣೆ ನಡೆಸಲಾಗಿದ್ದು, ೩೦ ಜನ ಕಾರ್ಯಕಾರಿ ಮಂಡಳಿ ಸದಸ್ಯರ ಪೈಕಿ ೧೦ ಮಹಿಳಾ ಹಾಗೂ ೨೦ ಪುರುಷ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಜಿಲ್ಲಾ ಸಮಿತಿಗೆ ಮೂರನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್.ಎಂ.ಲೋಕೇಶ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜು. ೧ರಿಂದ ೨೧ರವರೆಗೆ ಚುನಾವಣೆ ಪ್ರಕಿಯೆ ನಡೆದಿದೆ. ಮೂಡಿಗೆರೆ, ಕಡೂರು ತಾಲೂಕು ಘಟಕಗಳಿಗೆ ಅವಿರೋಧ ಆಯ್ಕೆ ನಡೆದಿದೆ ೭ ಮಹಿಳಾ, ೧೩ ಕಾರ್ಯ ನಿರ್ವಾಹಕ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದರು.
ಕಡೂರು ತಾಲೂಕು ಅಧ್ಯಕ್ಷರಾಗಿ ಎಸ್.ಪಿ.ರೇಣುಕಾರಾಧ್ಯ, ೧೩ ಪುರುಷ ಮತ್ತು ೭ ಮಹಿಳಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅಧ್ಯಕ್ಷರಾಗಿ ಕೆ.ಸಿ.ನಿಶಾಂತ್, ತರೀಕೆರೆ ತಾಲೂಕು ಅಧ್ಯಕ್ಷರಾಗಿ ಎಂ.ಬಿ.ಗಿರಿರಾಜ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳ ಸಹಕಾರದೊಂದಿಗೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಭಾ ಭವನ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಸತಿ ನಿಲಯಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿರುವ ಸಮಾಜದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ಸಾಧನೆ ಗೈದಿರುವ ಸಮಾಜದ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಪ್ರತೀ ಮನೆಮನೆಗಳಲ್ಲಿ ಮಹಾ ಸಭಾದ ಸದಸ್ಯತ್ವ ನೋಂದಣಿ ನಡೆಸಲು ಶೀಘ್ರದಲ್ಲೇ ಅಭಿಯಾನ ಆರಂಭಿಸುವುದಾಗಿ ತಿಳಿಸಿದ ಅವರು ಸಂಘಟನೆಯ ಎಲ್ಲ ಕಾರ್ಯಕ್ರಮಗಳು ಸಮಾಜದ ಎಲ್ಲ ಕುಟುಂಬಗಳಿಗೆ ತಲುಪುವಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜಗಜ್ಯೋತಿ ಬಸವೇಶ್ವರ, ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಜಿಲ್ಲಾ ಹಾಗೂ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಸಲು ಉz್ದೆÃಶಿಸಲಾಗಿದೆ. ಲಿಂಗಾಯತ ಸಮಾಜದ ಬಂಧುಗಳು ಸ್ವಾವಲಂಬಿಗಳಾಗಿ ಬದುಕಲು ಉತ್ತಮ ಬದುಕನ್ನು ರೂಪಿಸುವುದರ ಜೊತೆಗೆ ಸಂಘಟನೆ, ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಮಹಾಸಭಾ ನಿರ್ದೇಶಕರಾದ ಕೆ.ಆರ್.ದೃವಕುಮಾರ್, ಸೋಮಣ್ಣ, ಮೋಹನ್ ರಾಜ್, ಬಿ.ಆರ್.ಜಗದೀಶ್, ರುದ್ರಮುನಿ, ರೇಣುಕಾರಾಧ್ಯ, ಓಂಕಾರಪ್ಪ, ಶಾಲಿನಿ, ಪೂರ್ಣೇಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net