

ಕುಶಾಲನಗರ: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಕಾಂಗ್ರೆಸ್ ಬೆಂಬಲಿತರು ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರಾಗಿ ಎ.ಎನ್.ಮಂಜುನಾಥ್, ಉಪಾಧ್ಯಕ್ಷರಾಗಿ ಎ.ಆರ್.ಮೋಹನ್ ಅವಿರೋಧವಾಗಿ ಆಯ್ಕೆಯಾದರು. 13 ನಿರ್ದೇಶಕರ ಪೈಕಿ 9 ಜನರು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಟಿ.ಬಿ.ಮೋಹನ್ ಕಾರ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕುಶಾಲನಗರ ತಾಲೂಕು ನಿರ್ದೇಶಕ ಕೆ.ಎಸ್.ಕೃಷ್ಣೇಗೌಡ, ಕೆಡಿಪಿ ಸದಸ್ಯ ಟಿ. ಬಿ.ಜಗದೀಶ್ ಮತ್ತಿತರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಸಂಘದ ನಿರ್ದೇಶಕರಾದ ಬಿ.ಜೆ.ಶಿವಪ್ಪ, ಎ.ಪಿ.ರಂಗಸ್ವಾಮಿ, ಎ.ಆರ್.ಲೋಕೇಶ್ ಎ.ಎಚ್.ಶಿವಶಂಕರ್, ಸಿ.ಡಿ.ಸ್ವಾತಿ, ಜಯಮ್ಮ, ಡಿ.ಆರ್.ಪ್ರೇಮಕುಮಾರ್ ಮತ್ತಿತರರು ಇದ್ದರು.