ಸೂಚನೆ ನೀಡಿದ್ದರೂ ತರಬೇತಿಗೆ ಬಾರದ 145 ಸಿಬ್ಬಂದಿ: ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿ ಸೂಚನೆ

Dc Dr.H.N.Gopal Krishna
Published on

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ತರಬೇತಿಗೆ ಹಾಜರಾಗದ 145 ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದ್ದಾರೆ.

ಚುನಾವಣಾ ಕರ್ತವ್ಯಕ್ಕೆಂದು ನಿಯೋಜಿಸಿರುವ ಪಿಆರ್‌ಒ ಮತ್ತು ಎಪಿಆರ್‌ಒ ಸಿಬ್ಬಂದಿಗೆ ತರಬೇತಿ ಆಯೋಜಿಸಲಾಗಿತ್ತು. ಜತೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದಾಗ್ಯೂ ಗೈರಾದ ಹಿನ್ನೆಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವಂತೆ ಆಯಾಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net