ಚುನಾವಣೆ ಕರ್ತವ್ಯದಿಂದ ವಿನಾಯಿತಿ ನೀಡಿ

31mnv02
Published on

ಮಾನ್ವಿ: ನಿವೃತ್ತಿ ಅಂಚಿನಲ್ಲಿರುವ, ಕಾಯಿಲೆಗಳಿಂದ ಬಳಲುತ್ತಿರುವ, ಗರ್ಭಿಣಿಯರು, ಒಂದು ವರ್ಷದೊಳಗಿನ ಮಕ್ಕಳನ್ನು ಹೊಂದಿರುವ ತಾಯಂದಿರು, ಅಂಗವಿಕಲ ಸರ್ಕಾರಿ ನೌಕರರಿಗೆ ಲೋಕಸಭೆ ಚುನಾವಣೆ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿ ಸಹಾಯಕ ಚುನಾವಣಾಧಿಕಾರಿ ಡಿ.ಪ್ರಕಾಶಗೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಭಾನುವಾರ ಮನವಿ ಸಲ್ಲಿಸಲಾಯಿತು.

ಚುನಾವಣೆ ಕರ್ತವ್ಯದಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಲು ತಾಲೂಕು ಮೆಡಿಕಲ್ ಸ್ಕ್ರೀನಿಂಗ್ ಕಮಿಟಿ ರಚಿಸಿ ಅರ್ಹರಿಗೆ ಚುನಾವಣೆ ಕರ್ತವ್ಯದಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿದರು. ಪ್ರಮುಖರಾದ ಬಸವರಾಜ ಜಂಗಮರಹಳ್ಳಿ, ಪ್ರಕಾಶಬಾಬು, ತಾಜುದ್ದೀನ್, ಕೃಷ್ಣಮೂರ್ತಿ, ಶ್ರೀನಿವಾಸ, ನಾಗರಾಜ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net