16ರಂದು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ

Published on

ಸುಳ್ಯ: ತಾಲೂಕಿನ ರಾಜ್ಯ ಸರ್ಕಾರಿ ನೌಕರರ ಯೋಜನಾ ಶಾಖೆಗಳ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ನ.16ರಂದು ಚುನಾವಣೆ ನಡೆಯಲಿದೆ.

ಚುನಾವಣಾ ವೇಳಾಪಟ್ಟಿಯಂತೆ ನಾಮಪತ್ರ ಸಲ್ಲಿಸಲು ಅ.30ರಿಂದ ನ.7ರ ತನಕ ಅವಕಾಶವಿದೆ. ನಾಮಪತ್ರ ಪರಿಶೀಲನೆ ನ.8ರಂದು ನಡೆಯುವುದು. ಅದೇ ದಿನ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. 11ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅವಶ್ಯಕತೆ ಇದ್ದಲ್ಲಿ 16ರಂದು ಮತದಾನ ಸುಳ್ಯ ಶಾಖೆಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.

ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಅಧಿಕಾರಿ, ನಿವೃತ್ತ ಶಿಕ್ಷಕ ಅಚ್ಯುತ ಪಿ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net