ಫೆ.19ರಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

contractor election
Published on

ಬೆಂಗಳೂರು: ಡಿ.ಕೆಂಪಣ್ಣ ನಿಧನದಿಂದ ತೆರವಾಗಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಫೆ.19ರಂದು ಚುನಾವಣೆ ನಿಗದಿಯಾಗಿದೆ.

ಸಂಘದ ಪ್ರಭಾರ ಅಧ್ಯಕ್ಷರಾಗಿ ಜಗನ್ನಾಥ್​ ಬಿ.ಶೇಗಜಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘಕ್ಕೆ ಪೂರ್ಣಕಾಲಿಕ ಅಧ್ಯಕ್ಷರನ್ನಾಗಿ ಮಾಡುವ ನಿಟ್ಟಿನಲ್ಲಿ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಡಳಿತ ಮಂಡಳಿ ಸದಸ್ಯರು ಈಗಾಗಲೇ ತೀರ್ಮಾನಿಸಿದ್ದಾರೆ. ಇದು ಹಳೆಯ ಸಂಘವಾಗಿದೆ.

ನೂರಾರು ಗುತ್ತಿಗೆದಾರರು ಪ್ರಮುಖ ಕಾಮಗಾರಿಗಳನ್ನು ಕಾರ್ಯನಿರ್ವಹಿಸುತ್ತಾ ಬರುತ್ತಿದ್ದಾರೆ. ಇದೀಗ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿಸಿಕೊಂಡಿರುವ ಕಾಮಗಾರಿ ಬಿಲ್​ಗಳಿಗೆ ಹಣ ಪಾವತಿಸುವ ಸಂಬಂಧ ಸರ್ಕಾರದ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿದೆ. ಸಂಘಕ್ಕೆ ಪೂರ್ಣಕಾಲಿಕ ಅಧ್ಯಕ್ಷರು ಇದ್ದರೆ ಸರ್ಕಾರ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಬಲ ಸಿಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net