ಗ್ರಾಪಂ ತೆರವಾದ ಸ್ಥಾನಗಳಿಗೆ ಚುನಾವಣೆ

Published on

ಸುಳ್ಯ: ಗ್ರಾಪಂಗಳಲ್ಲಿ ತೆರವಾದ ಖಾಲಿ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನ.23ರಂದು ಚುನಾವಣೆ ನಡೆಯಲಿದೆ.

ಸುಳ್ಯ ತಾಲೂಕಿನಲ್ಲಿ ಮಂಡೆಕೋಲು, ಕೊಲ್ಲಮೊಗ್ರು, ನೆಲ್ಲೂರು ಕೆಮ್ರಾಜೆ ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಪಂಗಳಲ್ಲಿ ಒಂದೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 6ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, 12 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. 13 ರಂದು ನಾಮಪತ್ರ ಪರಿಶೀಲನೆ, 15ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ.

23ರಂದು ಚುನಾವಣೆ ನಡೆಯಲಿದ್ದು, 26ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net