

ಕುರುಗೋಡು: ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರಿಗೆ ಕುಡತಿನಿ ಕರವೇ ಸ್ವಾಭಿಮಾನ ಬಣದ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.
ಕರವೇ ಜಿಲ್ಲಾಧ್ಯಕ್ಷ ಕೋರಿ ರಮೇಶ ಮಾತನಾಡಿ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಅಕ್ರಮವಾಗಿ ಮದ್ಯ, ಹಣ ಹಾಗೂ ಸೀರೆ, ಕುಕ್ಕರ್ ಇತರ ವಸ್ತುಗಳನ್ನು ನೀಡುವ ಮೂಲಕ ಅಭ್ಯರ್ಥಿಗಳು ಮತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಿ ಚುನಾವಣೆ ಮುಗಿಯುವವರೆಗೂ ಯಾವುದೇ ಅಕ್ರಮಗಳು ನಡೆಯದಂತೆ ಕ್ರಮವಹಿಸಬೇಕು. ಪರವಾನಗಿ ಇಲ್ಲದ ಮದ್ಯ ಮಾರಾಟ ಹಾಗೂ ಹಣ ವರ್ಗಾವಣೆಯಾಗದಂತೆ ತಡೆಗಟ್ಟಿ ಪಾರದರ್ಶಕ ಚುನಾವಣೆ ನಡೆಸಬೇಕು.
ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಕೋರಿದರು.