ಚುನಾವಣೆಯಲ್ಲಿ ಸ್ಥಳೀಯರಿಗೆ ಅವಕಾಶ

JUL 06-HRP-02
ಹರಪನಹಳ್ಳಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸದಾನಂದಗೌಡ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ, ರಾಜ್ಯ ಸೌಹಾರ್ದ ಬ್ಯಾಂಕ್‌ನ ಅಧ್ಯಕ್ಷ ಜಿ.ನಂಜನಗೌಡ, ಬಿಜೆಪಿ ಮುಖಂಡ ಆರುಂಡಿ ನಾಗರಾಜ, ರಾಜ್ಯ ಸಹಕಾರ ಪ್ರಕೋಷ್ಠ ಸಮಿತಿ ಸಂಚಾಲಕ ಓಂಕಾರಗೌಡ, ವಕೀಲ ಲಿಂಗಾನಂದ ಇತರರಿದ್ದರು.
Published on

ಹರಪನಹಳ್ಳಿ: ಜನ ಸಂಘದ ಸಂಸ್ಥಾಪಕ ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬಿಜೆಪಿ ಭದ್ರಗೊಳಿಸೋಣ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಸಂಘದ ಸಂಸ್ಥಾಪಕ ಡಾ.ಶ್ಯಾಮಾಪ್ರಸಾದ್ ಮುಖರ್ಜಿ ಅವರು ದೇಶದಲ್ಲಿ ‘ಒಂದು ಸಂವಿಧಾನ, ಒಂದು ಬಾವುಟ’ ಇರಬೇಕು ಹೊರತು ಎರಡು ಬಾವುಟ, ಎರಡು ಸಂವಿಧಾನ ಇರಬಾರದು ಎನ್ನುವ ಧ್ಯೇಯ ಉದ್ದೇಶದಿಂದ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು.

ಮುಂಬರುವ ಚುನಾವಣೆಗಳಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡಿದರೆ, ಒಂದು ವೇಳೆ ಅಭ್ಯರ್ಥಿ ಚುನಾವಣೆಯಲ್ಲಿ ಪರಾಭವಗೊಂಡರೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಜನಸಾಮಾನ್ಯರ ಕೈಗೆ ಸ್ಥಳೀಯವಾಗಿ ಸಿಗುತ್ತಾರೆ. ಹೊರಗಿನವರಿಗೆ ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಪೆಟ್ಟಿಗೆ ಮುಚ್ಚಿಕೊಂಡು ಹೋಗುತ್ತಾರೆ ಎಂದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಪ್ನ ಮಲ್ಲಿಕಾರ್ಜುನ, ಪ್ರಮುಖರಾದ ಬಾಗಳಿ ಕೊಟ್ರೇಶಪ್ಪ, ಕಣವಿಹಳ್ಳಿ ಮಂಜುನಾಥ, ಎಂ.ಪಿ.ನಾಯ್ಕ, ಸಣ್ಣ ಹಾಲಪ್ಪ, ಶ್ರೀಪತಿ, ಕಡೆಮನಿ ಸಂಗಮೇಶ, ಜವಳಿ ಮಹೇಶ, ಬೂದಿ ನವೀನ, ಜಾನಕಮ್ಮ, ಪದ್ಮಾವತಿ, ಮಂಜುಳಾ, ಕಡಕೋಳ ಸಿದ್ದನಗೌಡ, ರೇವನಗೌಡ, ಉಟೇರ ರವಿ, ನಂದಿಬೇವೂರು ಚಾರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net