ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ: ಎಂಎಲ್ಸಿ ಮಧು ಜಿ.ಮಾದೇಗೌಡ ವಿಶ್ವಾಸ

KMD
Published on

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಶತಸ್ಸಿದ್ಧ. ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ಗೆಲುವು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮದ್ದೂರು ತಾಲೂಕು ಚಿಕ್ಕರಸಿನಕೆರೆ ಹೋಬಳಿಯ ಹಲವು ಗ್ರಾಮಗಳ ಮತಗಟ್ಟೆಗೆ ಭೇಟಿ ನೀಡಿದ ನಂತರ ಮೆಳ್ಳಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎದ್ದಿದ್ದು ಬಿಜೆಪಿ ಪಕ್ಷದ ಭ್ರಷ್ಟಾಚಾರ ಜನತೆಗೆ ತಿಳಿದಿದ್ದು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನೀಡಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

ಜಿಪಂ ಮಾಜಿ ಸದಸ್ಯ ಎ.ಎಸ್. ರಾಜೀವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ತಾಪಂ ಮಾಜಿ ಸದಸ್ಯ ಬಿ. ಗಿರೀಶ್, ಮುಖಂಡರಾದ ಆರ್. ಸಿದ್ದಪ್ಪ, ಅವಿನಾಶ್ ಮದ್ದೂರು, ಗ್ರಾಪಂ ಸದಸ್ಯರಾದ ವಿನಯ್ ಹೊನ್ನೇಗೌಡ, ಎಂ.ಪಿ. ರವಿಚಂದ್ರ, ಪೂಜಾರಿ ಮಹೇಶ್ ಸೇರಿದಂತೆ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net