ಪುತ್ತೂರು ಗ್ರಾಮಾಂತರ : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಶನಿವಾರ ನಡೆದ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತದ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್ ಬೆಂಬಲಿತರ ವಶದಲ್ಲಿದ್ದ ಆಡಳಿತ ಚುಕ್ಕಾಣಿಯನ್ನು ವಶಪಡಿಸಿಕೊಂಡಿದ್ದಾರೆ.
ಕಾಂಗ್ರೆಸ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ರೈತ ಸ್ನೇಹಿ ಬಳಗದ ಅಭ್ಯರ್ಥಿಗಳ ಪೈಕಿ ಒಬ್ಬರು ಮಾತ್ರ ಗೆಲುವು ಸಾಧಿಸಿದ್ದಾರೆ. ಹೀನಾಯ ಸೋಲಿನೊಂದಿಗೆ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.
ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿಗಳಾಗಿದ್ದ ತೀರ್ಥಾನಂದ ದುಗ್ಗಳ, ಜನಾರ್ದನ ಗೌಡ ಪಿ, ರಾಜೇಶ್ ಗೌಡ , ಸತೀಶ್ ಪಾಂಬಾರು, ಕಾಂಗ್ರೆಸ್ ಬೆಂಬಲಿತರಾಗಿದ್ದ ಪವನ್ ದೊಡ್ಡಮನೆ, ಮಹಿಳಾ ಸ್ಥಾನದಿಂದ ಸಹಕಾರ ಭಾರತಿ ಅಭ್ಯರ್ಥಿಗಳಾಗಿದ್ದ ಜಲಜಾಕ್ಷಿ ಮಾಧವ ಗೌಡ ಕುಂಟಿಕಾನ, ಸುನಂದ ಲೋಕನಾಥ ಗೌಡ ಬಾಯಂಬಾಡಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಪ್ರಭಾಕರ ರೈ ಕೊಂರ್ಬಡ್ಕ, ಹಿಂದುಳಿದ ವರ್ಗ ಎ ಸ್ಥಾನದಿಂದ ಪ್ರವೀಣ ಜಿ.ಕೆ, ಪರಿಶಿಷ್ಟ ಪಂಗಡ ಸ್ಥಾನದಿಂದ ಅಣ್ಣಪ್ಪ ನಾಯ್ಕ ಬಿ, ಪರಿಶಿಷ್ಟ ಸ್ಥಾನದಿಂದ ಕರಿಯ, ಸಾಲಗಾರರಲ್ಲದ ಸ್ಥಾನದಿಂದ ಪ್ರೇಮಾ ಗಂಗಾಧರ ಗೌಡ ಕುಂಟಿಕಾನ ಗೆಲುವು ಸಾಧಿಸಿದ್ದಾರೆ.