ನಿರ್ದೇಶಕ ಸ್ಥಾನದ ಚುನಾವಣೆ ಪಾರದರ್ಶಕವಾಗಿರಲಿ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ನಾಗೇಶ್ ಮನವಿ

Election of Director of Government Employees Union Mandya
Published on

ಮಂಡ್ಯ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆ ಪಾರದರ್ಶಕ ನ್ಯಾಯಸಮ್ಮತದಿಂದ ನಡೆಯಲಿ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ನಾಗೇಶ್ ಹೇಳಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ನ.16ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ 66 ಜನ ನಿರ್ದೇಶಕ ಸ್ಥಾನಕ್ಕೆ ಮತದಾನ ನಡೆಯಲಿದೆ. ಚುನಾವಣಾಧಿಕಾರಿಗಳು ನ್ಯಾಯ ಸಮ್ಮತ ಮತ್ತು ಪಾರದರ್ಶಕದಿಂದ ಚುನಾವಣೆ ನಡೆಸಿಕೊಡಬೇಕು ಎಂದು ಹೇಳಿದರು.

ನೌಕರರಾದ ರಮೇಶ್, ಆಶಾರಾಣಿ, ಪುಟ್ಟಸ್ವಾಮಿ, ಶ್ರೀನಿವಾಸ್ ಸೇರಿದಂತೆ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net