

ಮೈಸೂರು: ನಗರ ಪಾಲಿಕೆ ಮೇಯರ್, ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸೆ.6 ರಂದು ಮಧ್ಯಾಹ್ನ 12ಕ್ಕೆ ಚುನಾವಣೆ ನಿಗದಿ ಪಡಿಸಿ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ಗುರುವಾರ ಆದೇಶ ಹೊರಡಿಸಿದ್ದಾರೆ.
ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾಗಿದ್ದು, ಚುನಾವಣೆಯು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದು ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಚುನಾವಣೆಯಾಗಿದೆ.