

ಹರಪನಹಳ್ಳಿ: ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾಗಿ ಆಶ್ರಯ ಕಾಲನಿ ಸಕಿಪ್ರಾ ಶಾಲೆ ಶಿಕ್ಷಕ ಕೆ.ಅಂಜಿನಪ್ಪ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅರಸನಾಳು ಸಹಿಪ್ರಾ ಶಾಲೆ ಶಿಕ್ಷಕ ಕೆ.ಮರಿಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೌಡ್ರು ತಿಳಿಸಿದ್ದಾರೆ. ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ, ಖಜಾಂಚಿ ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿ ಪಂಪಣ್ಣ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಬಸವರಾಜ ಇತರರಿದ್ದರು.