

ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ 2ನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ರಾಜಮ್ಮ ಹಾಗೂ ಉಪಾಧ್ಯಕ್ಷೆಯಾಗಿ ಲಲಿತಾ ಆಯ್ಕೆಯಾದರು.
14 ಸದಸ್ಯ ಸ್ಥಾನದ ಬಲವನ್ನು ಹೊಂದಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಪೈಪೋಟಿ ಇಲ್ಲದ ಪರಿಣಾಮ ರಾಜಮ್ಮ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಲಲಿತಾ ಹಾಗೂ ಮಹದೇವಮ್ಮ ಎಂಬುವರು ನಾಮಪತ್ರ ಸಲ್ಲಿಸಿದರು. ಲಲಿತಾ 9 ಮತಗಳನ್ನು ಪಡೆದು ಉಪಾಧ್ಯಕ್ಷೆಯಾಗಿ ಜಯಗಳಿಸಿದರು. ಚುನಾವಣಾಧಿಕಾರಿಯಾಗಿ ಪಿಡಬ್ಲುೃಡಿ ಜೆಇ ಸುರೇಂದ್ರ ಕಾರ್ಯನಿರ್ವಹಿಸಿದರು. ಪಿಡಿಒ ರಂಗರಾಜು ಸಹಕಾರ ನೀಡಿದರು.