ಶಿರ್ವ ಸಹಕಾರಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ayke-1
Published on

ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕುತ್ಯಾರು ಪ್ರಸಾದ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ವೀರೇಂದ್ರ ಪಾಟ್ಕರ್ ಕೋಡುಗುಡ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸಂಘದ ಸಭಾಭವನದಲ್ಲಿ ಜರುಗಿದ ಚುನಾಯಿತ ಸರ್ವಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ವಲಯ ಮೇಲ್ವಿಚಾರಕ ಬಾಲಗೋಪಾಲ ಬಲ್ಲಾಳ್ ಉಪಸ್ಥಿತರಿದ್ದರು. ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಡುಪಿ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಪ್ರ.ದ. ಸಹಾಯಕ ರೋಹಿತ್ ನೆರವೇರಿಸಿದರು. ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net