ಶೈಕ್ಷಣಿಕ ಜಾಗೃತಿಯಿಂದ ಹಿಂದುಳಿದವರ ಅಭಿವೃದ್ಧಿ

Nela Ph 04 Abhinande
ತಾಲೂಕು ಪದಾಧಿಕಾರಿಗಳ ಆಯ್ಕೆ
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಜಾಗೃತಿ ಮೂಡಿದಾಗ ಮಾತ್ರ ಹಿಂದುಳಿದ ಸಮಾಜಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಕರ್ನಾಟಕ ಬಹುಜನ ಚಳವಳಿ ಸಂಘಟನೆ ಅಧ್ಯಕ್ಷ ಕನಕೇನಹಳ್ಳಿ ಕೃಷ್ಣಪ್ಪ ಅಭಿಪ್ರಾಯಪಟ್ಟರು.
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಬಹುಜನ ಚಳವಳಿ ಸಂಘಟನೆಯಿಂದ ಆಯೋಜಿಸಿದ್ದ ತಾಲೂಕು ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.
ಸರ್ಕಾರದಿಂದ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಂಡು ಸಬಲರಾಗಬೇಕು. ನೊಂದವರ ಕಣ್ಣೀರು ಒರೆಸುವ ಕಾರ್ಯವನ್ನು ಸಂಘಟನೆ ಮಾಡುತ್ತಿದ್ದು, ಸಾವಿರಾರು ಮಂದಿಗೆ ನ್ಯಾಯ ದೊರಕಿಸಿ ಕೊಟ್ಟಿದೆ. ಸಂಘಟನೆಯಲ್ಲಿ ಜವಾಬ್ದಾರಿ ತೆಗೆದುಕೊಂಡವರು ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಂದರು.
ತಾಲೂಕು ಅಧ್ಯಕ್ಷ ಎನ್.ಜಿ.ಚೇತನ್‌ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು. ಹೋಬಳಿ ಕೇಂದ್ರದಲ್ಲಿ ಸಂಘಟನೆ ರಚನೆ ಮಾಡಿ ನೊಂದವರ ಪರ ಕಾರ್ಯಗಳನ್ನು ಮಾಡಲಾಗುವುದು ಎಂದರು.
ಪದಾಧಿಕಾರಿಗಳ ಆಯ್ಕೆ: ನೂತನ ತಾಲೂಕು ಅಧ್ಯಕ್ಷರಾಗಿ ಎನ್.ಜಿ.ಚೇತನ್‌ಕುಮಾರ್, ತಾಲೂಕು ಕಾರ್ಯದರ್ಶಿ ಪ್ರಸನ್ನ, ಸಂಚಾಲಕ ಶಿವು, ಯುವ ಘಟಕ ಅಧ್ಯಕ್ಷ ಕಿರಣ್‌ಕುಮಾರ್, ಕಾರ್ಮಿಕ ಘಟಕ ಅಧ್ಯಕ್ಷರಾಗಿ ಮೂರ್ತಿ ಆಯ್ಕೆಯಾದರು.
ಕನ್ನಡ ರಣಧೀರರ ಪಡೆ ಅಧ್ಯಕ್ಷ ಚೇತನ್‌ಗೌಡ, ಮುಖಂಡ ಪಿ.ಗಂಗಾಧರ್, ವೈ.ಆನಂದ್‌ಮೌರ್ಯ, ಆದರ್ಶ ಇತರರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net