

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣಾ ಅಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚೆಕಪೋಸ್ಟಗಳನ್ನು ಸ್ಥಾಪಿಸಲಾಗಿದ್ದು ಗುರುವಾರ ನಿಪ್ಪಾಣಿ ವಿಧಾನ ಸಭಾ ಮತಕ್ಷೇತ್ರದ ವ್ಯಾಪ್ತಿಯ ಮುರಗೋಡ ರಸ್ತೆಯ ರಾಧಾನಗರಿ ಚೆಕ್ ಪೋಸ್ಟ್ ಗೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಅನೀರಿಕ್ಷತವಾಗಿ ಭೇಟಿ ನೀಡಿ ಪರಿಶೀಲಿಸಿದರು.
ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿ ಮಾಹಿತಿ ಪಡೆದ ಅವರು, ಖುದ್ದು ವಾಹನಗಳ ಪರಿಶೀಲನೆ ನಡೆಸಿದರು. ಸಿಬ್ಬಂದಿ ಅತೀ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ತಮ್ಮ ಕಾರ್ಯದಲ್ಲಿ ಉದಾಸೀನತೆ, ಅಜಾಗರೂಕತೆ ತೋರಿದಲ್ಲಿ ಹಾಗೂ ದೂರುಗಳು ಬಂದಲ್ಲಿ ಅಂತಹ ಸಿಬ್ಬಂದಿ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.