ಬಿಜೆಪಿ ಪೂರ್ವ ಕ್ಷೇತ್ರದಲ್ಲಿ ಚುನಾವಣೆ ಸಿದ್ಧತಾ ಸಭೆ

new bjp east new
Published on

ಹುಬ್ಬಳ್ಳಿ : ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಅಗತ್ಯ ಇದೆ ಎಂದು ಬಿಜೆಪಿ ಧಾರವಾಡ ಲೋಕಸಭಾ ಕ್ಷೇತ್ರದ ಸಂಚಾಲಕ ಮಾ. ನಾಗರಾಜ ಹೇಳಿದರು.

ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಕ್ಕೆ ಸೂಕ್ತ ಅನುದಾನ ನೀಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಹೋಗಿದ್ದು ನಾಚಿಕೆಗೇಡಿತನ ಎಂದರು.

ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ಚುನಾವಣೆಗೆ ಸಂಬಂಧಿಸಿದ ಎಲ್ಲ ಕಾರ್ಯ ಚಟುವಟಿಕೆಗಳನ್ನು ಚುನಾವಣಾ ನಿರ್ವಹಣಾ ಸಮಿತಿ ಮೂಲಕ ನಿರ್ವಹಿಸಲಾಗುವುದು. ಚುನಾವಣೆಯಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಪೂರ್ವ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸತೀಶ ಶೇಜವಾಡಕರ, ಮಾಜಿ ಶಾಸಕ ಅಶೋಕ ಕಾಟವೆ, ಪ್ರಮುಖರಾದ ಅರುಣ ಹುದ್ಲಿ, ಸಂತೋಷ ಅರಕೇರಿ, ಶಿವು ಮೆಣಸಿನಕಾಯಿ, ರಾಧಾಬಾಯಿ ಸಫಾರೆ, ರಾಜು ಜಾರತಾರಘರ, ಬಸವರಜ ಅಮ್ಮಿನಬಾವಿ, ನಾರಾಯಣ ಜರತಾರಘರ, ರಂಗಾ ಬದ್ದಿ, ಲಕ್ಷೀ ಕಾಂತ ಘೋಡಕೆ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net